ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾದ ಬಳಿಕ ಡಿ.ಕೆ ಶಿವಕುಮಾರ್ ಮೊತ್ತ ಮೊದಲ ಬಾರಿಗೆ ಕೃಷ್ಣನಗರಿ ಉಡುಪಿ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಜಿಲ್ಲೆಯ ಶಕ್ತಿ ಪೀಠಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಮತ್ತು ಕಮಲಶಿಲೆ ದುರ್ಗಾಪರಮೇಶ್ವರಿ ಭೇಟಿ ನೀಡಿ ದೇವಳದ ಪ್ರಧಾನ ಅರ್ಚಕ ನರಸಿಂಹ ಅಡಿಗ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಮಯದಲ್ಲಿ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜು ಪೂಜಾರಿ ಮತ್ತು ಮಾಜಿ ಕೊಲ್ಲೂರು ದೇವಳ ಆಡಳಿತ ಮಂಡಳಿ ಸದಸ್ಯ ರಮೇಶ್ ಗಾಣಿಗ ಕೊಲ್ಲೂರು ಮತ್ತಿತರರು ಉಪಸ್ಥಿತಿತರಿದ್ದರು.ದೇವಸ್ಥಾನದ ವತಿಯಿಂದ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
Kshetra Samachara
29/11/2020 11:14 am