ಉಡುಪಿ : ಕೋಟ ಶ್ರೀ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಳಕ್ಕೆ ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹಾಗೂ ವಿಧಾನಪರಿಷತ್ ಸದಸ್ಯ ರವಿ ಕುಮಾರ್ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ದೇವಳದ ಅರ್ಚಕ ಪ್ರತಿನಿಧಿ ಸುಬ್ರಾಯ ಜೋಗಿ ವಿಶೇಷ ಪೂಜೆ ಸಲ್ಲಿಸಿ ಪ್ತಸಾದ ವಿತರಿಸಿದರು.
ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಆನಂದ್ ಸಿ ಕುಂದರ್ ಸಚಿವ,ಪರಿಷತ್ ಸದಸ್ಯರನ್ನು ಶಾಲು ಹೋದಿಸಿ ಗೌರವಿಸಿದರು.
ಹಿಂದೂ ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಾಥ್ ನೀಡಿದರು.ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸುಬ್ರಾಯ ಆಚಾರ್ಯ, ಸುಶೀಲಸೋಮಶೇಖರ್,ಚಂದ್ರ ಪೂಜಾರಿ,ಕೋಟ ಗ್ರಾಮಪಂಚಾಯತ್ ಸದಸ್ಯರಾದ ಸಂತೋಷ್ ಪ್ರಭು,ಸಚಿವ ಕೋಟ ಆಪ್ತ ಸಹಾಯಕ ಹರೀಷ್ ಶೆಟ್ಟಿ, ಬಿಜೆಪಿ ಮುಖಂಡರಾದ ಮಹೇಶ್ ಕುಮಾರ್ ಕುಂದಾಪುರ,ರವೀಂದ್ರ ಜೋಗಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
12/01/2021 07:08 pm