ಮುಲ್ಕಿ: ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಸರಕಾರ ವಿಶೇಷ ಚಿಂತನೆ ನಡೆಸಿದ್ದು ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಮುಜರಾಯಿ ಇಲಾಖೆಯ ಸಚಿವರೊಂದಿಗೆ ಮಾತುಕತೆ ನಡೆಸುವುದಾಗಿ ಮುಲ್ಕಿ-ಮೂಡಬಿದ್ರೆ ಕ್ಷೇತ್ರದ ಶಾಸಕ ಉಮನಾಥ ಕೋಟ್ಯಾನ್ ಹೇಳಿದರು.
ಅವರು ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನದ ನೂತನ ಸೇವಾ ಕೌಂಟರ್ ಉದ್ಘಾಟಿಸಿ ಮಾತನಾಡಿ ಸರಕಾರದ ವಿಶೇಷ ಮುತುವರ್ಜಿಯಿಂದ ದೇವಸ್ಥಾನಗಳು ಅಭಿವೃದ್ಧಿಯತ್ತ ದಾಪುಗಾಲು ಹಾಕಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಅನುದಾನ, ದಾನಿಗಳ ನೆರವಿನಿಂದ ಆದಾಯ ರಹಿತ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಶ್ರಮಿಸಲಾಗುವುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಎನ್. ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದೇವಳದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿ, ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಅರ್ಚಕ ಪುರುಷೋತ್ತಮ ಭಟ್, ಸತೀಶ್ ಶೆಟ್ಟಿ ಕೆಂಚನಕೆರೆ, ಮತ್ತಿತರರು ಉಪಸ್ಥಿತರಿದ್ದರು.
ವ್ಯವಸ್ಥಾಪನಾ ಸಮಿತಿಯ ಸದಸ್ಯ ಹರೀಶ್ ಶೆಟ್ಟಿ ಸ್ವಾಗತಿಸಿದರು. ದಿನೇಶ್ಚಂದ್ರ ಅಜಿಲ ಧನ್ಯವಾದ ಅರ್ಪಿಸಿದರು. ಮೋಹನ್ ಕೋಟ್ಯಾನ್ ಶಿಮಂತೂರು ಕಾರ್ಯಕ್ರಮ ನಿರೂಪಿಸಿದರು.
Kshetra Samachara
16/08/2021 05:44 pm