ಉಡುಪಿ: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಆದಿಶಕ್ತಿ ಶ್ರೀ ಮಹದೇವಮ್ಮ ಭೈರವೇಶ್ವರ ಪುರಾತನ ದೇವಸ್ಥಾನವನ್ನು ಬಲವಂತದಿಂದ ಕಾನೂನುಬಾಹಿರವಾಗಿ ಒಡೆದು ಹಾಕಿರುವುದನ್ನು ಬಜರಂಗದಳ ತೀವ್ರವಾಗಿ ಖಂಡಿಸಿದೆ. ಈ ಕುರಿತು ಪಬ್ಲಿಕ್ ನೆಕ್ಸ್ಟ್ ಗೆ ಪ್ರತಿಕ್ರಿಯೆ ನೀಡಿರುವ ಮುಖಂಡರು, ಇದೊಂದು ಹಿಂದು ಸಮಾಜದ ಮೇಲೆ ಆದಂತಹ ದೊಡ್ಡ ಆಘಾತ. ಇದಕ್ಕೆ ಸಂಬಂಧಪಟ್ಟಂತೆ ಮೈಸೂರು ಜಿಲ್ಲಾಧಿಕಾರಿ ಹಾಗೂ ನಂಜನಗೂಡು ತಾಲ್ಲೂಕಿನ ತಹಶೀಲ್ದಾರ್ ಅವರನ್ನು ಅಮಾನತುಗೊಳಿಸಬೇಕು.
ತಕ್ಷಣ ಮೈಸೂರಿನಲ್ಲಿ ದೇವಸ್ಥಾನವನ್ನು ಧ್ವಂಸ ಮಾಡುವ ಕಾರ್ಯವನ್ನು ಅಧಿಕಾರಿಗಳು ನಿಲ್ಲಿಸಬೇಕು. ಈ ಪ್ರಕರಣವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಅಲ್ಲಿ ಚರ್ಚ್, ಮಸೀದಿಗಳಿದ್ದರೂ ಹಿಂದೂಗಳ ದೇವಸ್ಥಾನವನ್ನೇ ಟಾರ್ಗೆಟ್ ಮಾಡಿರುವುದು ಸ್ಪಷ್ಟವಾಗಿದೆ. ಇದರ ಹಿಂದೆ ಹಿಂದೂ ವಿರೋಧಿಗಳು ಅಧಿಕಾರಿಗಳ ಜತೆ ಶಾಮೀಲಾಗಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಈ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಬೇಕು .ಈ ಪ್ರಕರಣದಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗಿದೆ. ರಾಜ್ಯದಲ್ಲಿ ಯಾವುದೇ ದೇವಸ್ಥಾನ ಮತ್ತು ದೈವಸ್ಥಾನಗಳನ್ನು ತೆಗೆಯಬಾರದು ಎಂದು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಮುಖಂಡರು ಆಗ್ರಹಿಸಿದ್ದಾರೆ.
Kshetra Samachara
15/09/2021 02:17 pm