ಬಜಪೆ: ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ ಸುಂಕದಕಟ್ಚೆಯಲ್ಲಿ ನಡೆಯುತ್ತಿರುವ ನವರಾತ್ರಿ ಮಹೋತ್ಸವದ ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ ಭರತ್ ವೈ ಶೆಟ್ಟಿ ಭಾಗವಹಿಸಿದರು. ಕ್ಷೇತ್ರದ ಧರ್ಮದರ್ಶಿ ನಾರಾಯಣ ಪೂಜಾರಿ ಅವರು ಶಾಸಕರನ್ನು ಶಾಲು ಹಾಕಿ ದೇವರ ಪ್ರಸಾದ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಕೋಡಿಕಲ್‌ನ ಕಾರ್ಪೊರೇಟರ್ ಕಿರಣ್ ಕುಮಾರ್, ಕಂದಾವರ ಗ್ರಾಮ ಪಂಚಾಯತ್ ಅಧ್ಯಕ್ಷ ಉಮೇಶ್ ಮೂಲ್ಯ, ಕೊಳಂಬೆ ಶಕ್ತಿ ಕೇಂದ್ರ ಅಧ್ಯಕ್ಷ ಸುಕೇಶ್ ಮಾಣೖ, ಎಸ್ಸಿ ಮೋರ್ಚ ಜಿಲ್ಲಾ ಉಪಾಧ್ಯಕ್ಷ ಲೋಕೇಶ್ ಕಜೆ, ಮಂಡಲ ಉಪಾಧ್ಯಕ್ಷ ಅಮೃತ್ ಲಾಲ್ ಉಪಸ್ಥಿತರಿದ್ದರು.
Kshetra Samachara
09/10/2021 05:12 pm