ಕೊಲ್ಲೂರು: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಕುಟುಂಬ ಸಮೇತ ಭೇಟಿ ನೀಡಿದ್ದಾರೆ.
ಇಂದು ಬೆಳಿಗ್ಗೆ ಇಲ್ಲಿಗಾಗಮಿಸಿದ ಸಚಿವರು ಶ್ರೀ ಮೂಕಾಂಬಿಕೆಯ ದರ್ಶನ ಪಡೆದರು. ಬಳಿಕ ವಿಶೇಷ ಚಂಡಿಕಾ ಹೋಮದಲ್ಲಿ ಭಾಗಿಯಾದರು.ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಪ್ರಥಮ ಬಾರಿಗೆ ಕೊಲ್ಲೂರಿಗೆ ಭೇಟಿ ನೀಡಿದ ಸಚಿವರು, ಪ್ರಧಾನ ಅರ್ಚಕ ಶ್ರೀಧರ್ ಅಡಿಗರ ನೇತೃತ್ವದಲ್ಲಿ ನಡೆದ ಚಂಡಿಕಾ ಹೋಮದಲ್ಲಿ ಪಾಲ್ಗೊಂಡರು.
ಇದಕ್ಕೂ ಮುನ್ನ ದೇವಳಕ್ಕೆ ಆಗಮಿಸಿದ ಸಚಿವರನ್ನು ಸಕಲ ಗೌರವಗಳೊಂದಿಗೆ ಆಡಳಿತ ಮಂಡಳಿ ಬರಮಾಡಿಕೊಂಡಿತು. ಅಂದ ಹಾಗೇ ನವರಾತ್ರಿ ಸಂದರ್ಭ ದೇವಿ ದೇವಸ್ಥಾನಕ್ಕೆ ಭಕ್ತರ ದಂಡೇ ಆಗಮಿಸುತ್ತಿದೆ.
Kshetra Samachara
12/10/2021 11:43 am