ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕೂಳೂರಿನಲ್ಲಿ ನಾಗನ ಕಟ್ಟೆ ಧ್ವಂಸ; ಡಿವೈಎಫ್‌ಐ ಪ್ರತಿಭಟನೆ

ಮಂಗಳೂರು: ನಗರದ ಕೂಳೂರಿನಲ್ಲಿ ನಾಗಬನದಲ್ಲಿನ ನಾಗನ ಕಟ್ಟೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿರುವ ಪ್ರಕರಣವನ್ನು ಖಂಡಿಸಿ, ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಡಿವೈಎಫ್‌ಐ ಪಂಜಿಮೊಗರು ಘಟಕದ ನೇತೃತ್ವದಲ್ಲಿ ಕೂಳೂರು ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆ ಉದ್ದೇಶಿಸಿ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ, ದ.ಕ.ಜಿಲ್ಲೆಯಲ್ಲಿ ಅಲ್ಲಲ್ಲಿ ಶಾಂತಿ ಕದಡುವ ಘಟನೆಗಳು ಹೆಚ್ಚುತ್ತಿದ್ದು, ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸುವ ಮ‌ೂಲಕ ಕೋಮು ವೈಷಮ್ಯ ಸೃಷ್ಟಿಸುವ ಕಾರ್ಯ ನಡೆಯುತ್ತಿದೆ. ಇತ್ತೀಚೆಗೆ ಕೋಮು ಉದ್ರೇಕಕಾರಿ ಭಾಷಣಗಳನ್ನು ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದ್ದು, ಇದರ ಪರಿಣಾಮ ಅಶಾಂತಿ ಸೃಷ್ಟಿಸುವ ಕೃತ್ಯಗಳು ನಡೆಯುತ್ತಿದೆ ಎಂದರು.

ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ ಮಾತನಾಡಿ, ಕೂಳೂರು - ಕಾವೂರು ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಚೂರಿ ಇರಿತ, ಹಲ್ಲೆ ಪ್ರಕರಣಗಳು ವರದಿಯಾಗುತ್ತಿದ್ದು, ಇದೀಗ ನಾಗಬನವನ್ನು ಅಪವಿತ್ರಗೊಳಿಸುವ ಮೂಲಕ ಜನರಲ್ಲಿ ಭಯ ಹಾಗೂ ಅಪನಂಬಿಕೆ ವಾತಾವರಣ ಸೃಷ್ಟಿ ಮಾಡುವ ಕಾರ್ಯ ನಡೆಯುತ್ತಿದೆ. ಪರಿಸರದಲ್ಲಿ ಗಾಂಜಾ, ಮಾದಕ ವ್ಯಸನಿಗಳ ಹಾವಳಿ ತೀವ್ರವಾಗಿದೆ ಎಂದರು.

Edited By : Nagaraj Tulugeri
Kshetra Samachara

Kshetra Samachara

24/10/2021 09:48 pm

Cinque Terre

5.46 K

Cinque Terre

0

ಸಂಬಂಧಿತ ಸುದ್ದಿ