ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕಾರಿಂಜದ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಪರಿಸರದಲ್ಲಿ ನಡೆಯುತ್ತಿರುವ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸಬೇಕು ಎಂದು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಮಂಗಳೂರು ವಿಭಾಗದ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಇಂದು ಪ್ರತಿಭಟನಾ ಧರಣಿ ನಡೆಯಿತು.
ಧರಣಿಯ ನೇತೃತ್ವ ವಹಿಸಿದ್ದ ಗುರುಪುರ ಶ್ರೀ ರಾಜಶೇಖರಾನಂದ ಸ್ವಾಮೀಜಿ ಮಾತನಾಡಿ, ನಮ್ಮ ಹೋರಾಟ ಸರ್ಕಾರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಆದರೆ, ಕುಂಭಕರ್ಣ ನಿದ್ದೆಯಲ್ಲಿರುವ ಅಧಿಕಾರಿಗಳಿಗೆ ಅರ್ಥವೇ ಆಗುವುದಿಲ್ಲ. ಕೆಲವು ದಿನಗಳ ಹಿಂದೆ ಜಿಲ್ಲಾಧಿಕಾರಿಯವರು ಕಾರಿಂಜ ಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದೀರಿ ಸಂತೋಷ. ಆದರೆ, ಅಲ್ಲಿ ಏನು ನಡೆದಿದೆ ಎಂಬ ಬಗ್ಗೆ ಮಾಹಿತಿಯನ್ನು ಮಾಧ್ಯಮಕ್ಕೆ ನೀಡಬೇಕಿತ್ತು.
ಸಂತರು, ಮಠಾಧಿಪತಿಗಳು ಅಂದ್ರೆ ಏನಂತ ಭಾವಿಸಿದ್ದೀರಿ ನೀವು? ಕಾನೂನು- ಕಾನೂನು ಎಂದು ಹೇಳ್ತೀರಲ್ವಾ ನೀವು, ಕಾನೂನು ಏನು ಉಪ್ಪು ಹಾಕಿ ನೆಕ್ಕಲಿಕ್ಕಿರುವುದಾ? ಎಂದು ಖಾರವಾಗಿಯೇ ಪ್ರಶ್ನಿಸಿದರು.
Kshetra Samachara
21/12/2021 04:54 pm