ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮಹಿಳೆಯರ ವಿವಾಹ ವಯಸ್ಸು 21ಕ್ಕೆ ಏರಿಸಿದ್ದರಿಂದ ಹಿಂದೂಗಳಿಗೆ ಅನ್ಯಾಯ: ಸ್ವರ್ಣವಲ್ಲಿ ಸ್ವಾಮೀಜಿ ಗರಂ!

ಉಡುಪಿ: ಮಹಿಳೆಯರ ವಿವಾಹದ ವಯಸ್ಸು 21ಕ್ಕೆ ಏರಿಸಿ ಕೇಂದ್ರ ಸರ್ಕಾರ ಮಾಡಿರುವ ನಿರ್ಣಯದ ವಿರುದ್ಧ ಸ್ವರ್ಣವಲ್ಲಿ ಸ್ವಾಮಿಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಮರುಪರಿಶೀಲನೆ ಮಾಡಬೇಕು. ಈ ನಿರ್ಧಾರದಿಂದ ಹಿಂದೂಗಳಿಗೆ ಅನ್ಯಾಯವಾಗುತ್ತದೆ ಎಂದು ಸ್ವರ್ಣವಲ್ಲಿ ಸ್ವಾಮೀಜಿ ಹೇಳಿದ್ದಾರೆ.

ಉಡುಪಿಯ ಕೃಷ್ಣಮಠದ ವಿಶ್ವಾರ್ಪಣಂ ಧಾರ್ಮಿಕ ಸಭೆಯಲ್ಲಿ ಮಾತಮಾಡಿದ ಸ್ವಾಮೀಜಿ, ಕ್ರೈಸ್ತರಿಗೆ, ಮುಸ್ಲಿಮರಿಗೆ ವಿವಾಹದ ಕಾನೂನು ಬೇರೆ ಇದೆ. ನೀವು ಮಾಡುತ್ತಿರುವ ಹೊಸ ನಿರ್ಣಯ ಹಿಂದೂಗಳಿಗೆ ಮಾತ್ರ ಯಾಕೆ? ಎಲ್ಲರಿಗೂ ಅನ್ವಯವಾಗುವ ರೀತಿ ನೀವು ಯಾಕೆ ಕಾನೂನು ಕಾಯ್ದೆ ರೂಪಿಸುತ್ತಿಲ್ಲ? ಎಲ್ಲರಿಗೂ ಸಮಾನ ಕಾಯ್ದೆ ಜಾರಿಗೆ ತನ್ನಿ. ಅದಕ್ಕೆ ನಮ್ಮ ಪೂರ್ಣ ಬೆಂಬಲವಿದೆ. ಮುಸ್ಲಿಮರ ಕಾನೂನಲ್ಲಿ ವಿವಾಹದ ವಯಸ್ಸು ಈಗಲೂ 15 ಇದೆ. ಈ ಕಾನೂನಿನ ಪ್ರಕಾರ ಮುಸ್ಲಿಮರ ಜನಸಂಖ್ಯೆ ಏರಿಕೆ ಪ್ರಮಾಣ ಜಾಸ್ತಿ ಇದೆ. ಹಿಂದೂಗಳ ಜನಸಂಖ್ಯೆ ಏರಿಕೆ ಪ್ರಮಾಣ ಕಮ್ಮಿ ಇದೆ. ಹಿಂದೂಗಳ ಸಂಖ್ಯೆ ಇಳಿಕೆಯಾಗುತ್ತಿರುವ ವಿಚಾರದಲ್ಲಿ ರಾಷ್ಟ್ರಮಟ್ಟದಲ್ಲಿ ಸಂತರು ಕಳವಳಗೊಂಡಿದ್ದಾರೆ. ನಮ್ಮ ದೇಶದಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗುವ ಅಪಾಯ ಇದೆ. ಇದರ ಬಗ್ಗೆ ಗಂಭೀರವಾದ ಚಿಂತನೆ ಮಾಡಿ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಜಪಾನ್, ಬ್ರಿಟನ್ ,ಅಮೆರಿಕದಲ್ಲಿ ಮದುವೆಗೆ 16ರಿಂದ 18 ವಯೋಮಿತಿ ಇದೆ. ಸರಕಾರ ಕೊಡುವ ವೈಜ್ಞಾನಿಕ ಕಾರಣಗಳ ಬಗ್ಗೆ ನಮಗೆ ಒಪ್ಪಿಗೆ ಇದೆ. ಆದರೆ ಹೆಣ್ಣುಮಕ್ಕಳಿಗೆ ತೊಂದರೆ ಆಗಬಾರದು. ತಡವಾದ ವಿವಾಹದಿಂದ ವಿಚ್ಛೇದನ ಜಾಸ್ತಿಯಾಗಿದೆ. ಕುಟುಂಬ ವ್ಯವಸ್ಥೆ ಶಿಥಿಲಗೊಂಡಿದೆ. ವಿವಾಹದ ವಯಸ್ಸನ್ನು ಸರಕಾರ ಏರಿಕೆ ಮಾಡಿರುವುದರಿಂದ ಇನ್ನಷ್ಟು ಸಮಸ್ಯೆಗಳು ಬಾಧಿಸಲಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Edited By : Manjunath H D
Kshetra Samachara

Kshetra Samachara

21/12/2021 05:19 pm

Cinque Terre

14.22 K

Cinque Terre

4

ಸಂಬಂಧಿತ ಸುದ್ದಿ