ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಭಾರತ ಮತ್ತು ಪಾಕಿಸ್ಥಾನದ ಮುಸ್ಲಿಮರನ್ನು ಮತಾಂತರ ಮಾಡಬೇಕಿರುವುದು ನಮ್ಮ ಕರ್ತವ್ಯ; ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ!

ಉಡುಪಿ: ನಿನ್ನೆ ಉಡುಪಿ ಪ್ರವಾಸದಲ್ಲಿದ್ದ ಸಂಸದ ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಅದಮಾರು ಮಠದ "ವಿಶ್ವಾರ್ಪಣಂ" ವೇದಿಕೆಯು ಈ ಹೇಳಿಕೆಗೆ ಸಾಕ್ಷಿಯಾಯಿತು.ರಾತ್ರಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ತೇಜಸ್ವಿ ಸೂರ್ಯ ,ಮುಸಲ್ಮಾನರು ಮತ್ತು ಕ್ರೈಸ್ತರ ವಿರುದ್ಧ ದ್ವೇಷ ಭಾಷಣ ಮಾಡಿದ್ದಾರೆ.

ಮಾತಿನ ಉದ್ದಕ್ಕೂ ಮುಸ್ಲಿಂ ಕ್ರೈಸ್ತರ ಕುರಿತು ದ್ವೇಷ ಉಗುಳಿರುವ ಸೂರ್ಯ ,ಮುಸ್ಲಿಮರನ್ನು ಮತ್ತು ಕ್ರೈಸ್ತರನ್ನು ಮತಾಂತರ ಮಾಡದೆ ಬೇರೆ ದಾರಿಯೇ ಇಲ್ಲ.

ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನೂ ಹಿಂದೂ ಧರ್ಮಕ್ಕೆ ಕರೆತರಬೇಕು,ಚೀನಾ, ಜಪಾನಿಗೆ ಮತಾಂತರಗೊಂಡವರನ್ನು ಭಾರತಕ್ಕೆ ತರಬೇಕು.

ಟಿಪ್ಪು ಜಯಂತಿಯಂದೇ ನಾವು ಹಿಂದೂ ಧರ್ಮಕ್ಕೆ ಇವರನ್ನೆಲ್ಲ ಮರುಮತಾಂತರ ಮಾಡಬೇಕು ಎಂದು ಸೌಹಾರ್ದಕ್ಕೆ ಧಕ್ಕೆ ತರುವ ಹೇಳಿಕೆ ನೀಡಿದ್ದಾರೆ.

ಟಿಪ್ಪುವಿನ ಖಡ್ಗದ ಕಾರಣಕ್ಕೆ ಬಹಳ ಮತಾಂತರಗಳು ಆಗಿವೆ ಎಂದ ಅವರು,ಅಸಾಧ್ಯ ಎಂಬುದು ಯಾವುದೂ ಇಲ್ಲ.

ನಮ್ಮ ಮನೆ, ಪಕ್ಕದ ಗ್ರಾಮ ಮತ್ತು ಊರುಗಳಲ್ಲಿ ಘರ್ ವಾಪಸೀ ಮಾಡಬೇಕು.ನಾವು ದೊಡ್ಡದಾಗಿ ಕನಸನ್ನು ಕಾಣಬೇಕು.

ಪಾಕಿಸ್ತಾನದ ಮುಸಲ್ಮಾನರನ್ನು ಹಿಂದೂಗಳಾಗಿ ಪರಿವರ್ತನೆ ಮಾಡಬೇಕು.

ಘರ್ ವಾಪಸಿಯನ್ನು ಆದ್ಯ ಕರ್ತವ್ಯದ ರೀತಿಯಲ್ಲಿ ನಾವು ಮಾಡಬೇಕಾಗಿದೆ. ಅಖಂಡ ಭಾರತದ ಕಲ್ಪನೆಯಲ್ಲಿ ಪಾಕಿಸ್ತಾನವು ಇದೆ.

ಮಠ, ದೇವಸ್ಥಾನ ಇದರ ಮುಂದಾಳತ್ವ ವಹಿಸಬೇಕು ಎಂದು ಹೇಳಿದ್ದಾರೆ.

Edited By : Shivu K
PublicNext

PublicNext

26/12/2021 10:20 am

Cinque Terre

46.95 K

Cinque Terre

55

ಸಂಬಂಧಿತ ಸುದ್ದಿ