ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಧಾನಿ ದೀರ್ಘಾಯುಷ್ಯಕ್ಕಾಗಿ ಬಿಜೆಪಿ ಮಹಿಳಾ ಮೋರ್ಚಾದಿಂದ ಮೃತ್ಯುಂಜಯ ಜಪ, ವಿಶೇಷ ಪೂಜೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಬೇಟಿ ಸಂದರ್ಭದಲ್ಲಿ ನಿಗದಿತ ಭದ್ರತಾ ಸುರಕ್ಷಾ ಕ್ರಮಗಳನ್ನು ಕೈಗೊಳ್ಳದೇ ಕೀಳು ರಾಜಕೀಯ ಪ್ರದರ್ಶಿಸಿರುವ ಪಂಜಾಬಿನ ಕಾಂಗ್ರೆಸ್ ಸರಕಾರದ ನಡೆಯನ್ನು ಉಡುಪಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸಿದೆ. ಈ ಸಂಬಂಧ ತಪ್ಪಿತಸ್ಥರ ವಿರುದ್ಧ ಉಗ್ರ ಕ್ರಮವನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿದೆ.

ಈ ವಿಲಕ್ಷಣ ಸನ್ನಿವೇಶದಲ್ಲಿ ಪ್ರಧಾನಿ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಉಡುಪಿ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಮೃತ್ಯುಂಜಯ ಜಪ ಮತ್ತು ವಿಶೇಷ ಪೂಜೆಯನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಹರೀಶ್ ರಾಮ್ ಮುಂತಾದವರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

07/01/2022 12:43 pm

Cinque Terre

9.48 K

Cinque Terre

4

ಸಂಬಂಧಿತ ಸುದ್ದಿ