ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಆರೋಗ್ಯ ಮತ್ತು ಆಯುಷ್ಯ ವೃದ್ಧಿಗಾಗಿ ʼಮಹಾ ಮೃತ್ಯುಂಜಯʼ ಯಾಗ ನಡೆಯುತ್ತಿದೆ. ಧರ್ಮಸ್ಥಳ ದೇಗುಲದ ಅಮೃತವರ್ಷಿಣಿ ಸಭಾಂಗಣದ ಏಳು ಹೋಮ ಕುಂಡಗಳಲ್ಲಿ ಈ ಮಹಾಯಾಗ ನಡೆಯುತ್ತಿದ್ದು, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ 108 ಮಂದಿ ಪುರೋಹಿತರು ಯಾಗದಲ್ಲಿ ಭಾಗಿಯಾಗಿದ್ದಾರೆ.
ವೇದಮೂರ್ತಿ ನಾಗೇಂದ್ರ ಭಾರದ್ವಾಜ್ ಸುರತ್ಕಲ್ ಅವರ ಪೌರೋಹಿತ್ಯದಲ್ಲಿ ಯಾಗ ನಡೆಯುತ್ತಿದೆ. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರೂ ಯಾಗಕ್ಕೆ ಸಂಪೂರ್ಣ ಬೆಂಬಲ, ನೆರವು ನೀಡುತ್ತಿದ್ದಾರೆ. ಈಗಾಗಲೇ ಹರೀಶ್ ಪೂಂಜ ನೇತೃತ್ವದಲ್ಲಿ ಬೆಳ್ತಂಗಡಿಯ 25 ಕ್ಷೇತ್ರಗಳಲ್ಲಿ ನಡೆದಿರುವ ಯಾಗಗಳ ಪೂರ್ಣಾಹುತಿ ನೆಲೆಯಲ್ಲಿ ಧರ್ಮಸ್ಥಳದಲ್ಲಿ ಮಹಾಮೃತ್ಯುಂಜಯ ಯಾಗ ನಡೆಯುತ್ತಿದೆ. ಸಚಿವರಾದ ಈಶ್ವರಪ್ಪ, ಸಿ.ಸಿ.ಪಾಟೀಲ್, ಶಶಿಕಲಾ ಜೊಲ್ಲೆ, ಕೋಟ ಶ್ರೀನಿವಾಸ ಪೂಜಾರಿ ಸಹಿತ ಹಲವಾರು ಮಂದಿ ಸಚಿವರು, ಶಾಸಕರು ಯಾಗದಲ್ಲಿ ಭಾಗಿಯಾಗಿದ್ದಾರೆ.
Kshetra Samachara
17/01/2022 01:20 pm