ಉಡುಪಿ:ಇವತ್ತು ಉಡುಪಿಗೆ ಆಗಮಿಸಿದ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ,ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಬಿ.ಆಚಾರ್ ಕೃಷ್ಣಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಬಳಿಕ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಪ್ರಸಾದ ಪಡೆದರು.
ಈ ಸಂದರ್ಭದಲ್ಲಿ,ಗಣಿ ಮತ್ತು ಭೂವಿಜ್ಞಾನ ಇಲಾಖಾ ಮುಖ್ಯ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ,ಇಲಾಖೆಯ ನಿರ್ದೇಶಕ ರಾಮಮನೋಹರ ಪ್ರಸಾದ್,ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್,ಜಿಲ್ಲಾಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ ಭಟ್,ಸಚಿವರ ಪತ್ನಿ ಹಾಗೂ ಆಪ್ತ ಕಾರ್ಯದರ್ಶಿ ಡಾ.ನಂದನ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
Kshetra Samachara
28/01/2022 05:30 pm