ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿಜಾಬ್ ವಿವಾದ: ಉನ್ನತ ಮಟ್ಟದ ತನಿಖೆಗೆ ಶಾಸಕ ರಘುಪತಿ ಭಟ್ ಮನವಿ

ಉಡುಪಿ: ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್, ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಸಂಜೀವ ಮಠಂದೂರು, ಉಮಾನಾಥ ಕೋಟ್ಯಾನ್ ಅವರು ಸಹಿ ಮಾಡಿರುವ ಮನವಿ ಪತ್ರವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ನೀಡಿದ್ದಾರೆ.

ಕೋಮು ಮತ್ತು ಮತೀಯವಾದ ಸೃಷ್ಟಿಸಿ ಸಾಮಾಜಿಕ ಸ್ವಾಸ್ಥ್ಯ ಹಾಳು ಮಾಡಲು ಮತೀಯ ಸಂಘಟನೆಗಳು ಹುನ್ನಾರ ನಡೆಸಿವೆ. ಪಾಕಿಸ್ಥಾನ ಕೂಡ ಇದರಲ್ಲಿ ಮಧ್ಯಪ್ರವೇಶ ಮಾಡಿದೆ. ಹಿಜಾಬ್ ವಿಚಾರವಾಗಿ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಅವಲೋಕಿಸಿದಾಗ ದೇಶದ ಘನತೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕುಂದಿಸಲು, ಭಾರತದಲ್ಲಿ ಮುಸ್ಲಿಮರು ಸುರಕ್ಷಿತರಲ್ಲ ಎಂಬ ಭಾವನೆ ಹುಟ್ಟುಹಾಕುವ ಪ್ರಯತ್ನ ನಡೆಯುತ್ತಿದೆ. ಮುಸ್ಲಿಂ ವಿದ್ಯಾರ್ಥಿನಿಯರನ್ನು ಶಿಕ್ಷಣದಿಂದ ವಂಚಿತರನ್ನಾಗಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಿಂಬಿಸುವ ಪ್ರಯತ್ನವನ್ನು ಮತಾಂಧ ಸಂಘಟನೆಗಳು ಮಾಡುತ್ತಿವೆ. ಹೀಗಾಗಿ ಹಿಜಾಬ್ ವಿಚಾರವನ್ನೇ ಮುಂದಿಟ್ಟುಕೊಂಡು ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಪ್ರಯತ್ನವನ್ನು ಮಟ್ಟಹಾಕಲು ಉನ್ನತ ಮಟ್ಟದ ತನಿಖೆ ನಡೆಸುವಂತೆ ಮನವಿಯಲ್ಲಿ ಆಗ್ರಹಿಸಿದ್ದಾರೆ.

Edited By : Nagaraj Tulugeri
PublicNext

PublicNext

16/02/2022 02:06 pm

Cinque Terre

25.02 K

Cinque Terre

2

ಸಂಬಂಧಿತ ಸುದ್ದಿ