ಕಾಪು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುನರಾಯ್ಕೆ ಬಯಸಿ ಅವರ ಶ್ರೇಯೋಭಿವೃದ್ಧಿಗಾಗಿ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಮಹಾಗಣಪತಿ ಅಥರ್ವಶೀರ್ಷ ಮಹಾಯಾಗ ನಡೆಯಿತು.
ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ವೇ. ಮೂ. ಕುತ್ಯಾರು ಕೇಂಜ ಶ್ರೀಧರ ತಂತ್ರಿಗಳ ಮಾರ್ಗದರ್ಶನದಲ್ಲಿ ವೇ.ಮೂ. ಕೊಡವೂರು ಸೀತಾರಾಮ ಆಚಾರ್ಯ ಆಚಾರ್ಯ ಅವರ ನೇತೃತ್ವದಲ್ಲಿ ಸುಮಾರು 20 ಮಂದಿ ಋತ್ವಿಜರ ನೇತೃತ್ವದಲ್ಲಿ ಗಣಪತಿ ಅಥರ್ವಶೀರ್ಷ ಮಹಾಯಾಗ ಸಂಪನ್ನಗೊಂಡಿತು.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಪರವಾಗಿ ಬೆಂಗಳೂರಿನ ಉದ್ಯಮಿ ಸುಧಾಕರ್ ಕೆ. ಅವರು ಯಾಗದ ಸೇವಾರ್ಥಿಯಾಗಿ ಯಾಗದ ಪ್ರಾಯೋಜಕತ್ವ ವಹಿಸಿದ್ದರು.
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
Kshetra Samachara
21/02/2022 01:20 pm