ಮಣಿಪಾಲ: ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಖಂಡಿಸಿ ಉಡುಪಿಯ ಮಣಿಪಾಲದಲ್ಲಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಮಣಿಪಾಲದ ಟೈಗರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿ ತನಕ ಮೆರವಣಿಗೆ ಮೂಲಕ ಸಾಗಿದ ಕಾರ್ಯಕರ್ತರು ಹರ್ಷ ಪರ ಘೋಷಣೆಗಳನ್ನು ಕೂಗಿದರು. ಹರ್ಷನ ಕೊಲೆಯನ್ನು ವ್ಯರ್ಥವಾಗಲು ಬಿಡುವುದಿಲ್ಲ ಎಂದು ಹೇಳಿದ ಕಾರ್ಯಕರ್ತರು, ಮುಸ್ಲಿಂ ಸಂಘಟನೆಗಳ ವಿರುದ್ಧ ಹರಿಹಾಯ್ದರು. ಕೈಯಲ್ಲಿ ಕೇಸರಿ ಧ್ವಜ ಹಿಡಿದು ಮೆರವಣಿಗೆಯುದ್ದಕ್ಕೂ ಘೋಷಣೆಗಳನ್ನು ಕೂಗಿದರು. ವಿಶ್ವ ಹಿಂದೂ ಪರಿಷತ್, ಬಜರಂಗದಳ ಮತ್ತು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾದರು. ಹಿಂದೂ ಕಾರ್ಯಕರ್ತನನ್ನು ಹತ್ಯೆಗೈದವರಿಗೆ ಕಠಿಣ ಶಿಕ್ಷೆಯಾಗಬೇಕು. ಇನ್ನು ಮುಂದೆ ಈ ರೀತಿ ಕಾರ್ಯಕರ್ತರ ಹತ್ಯೆ ಪುನರಾವರ್ತನೆಯಾದರೆ ಅದಕ್ಕೆ ತಕ್ಕ ಉತ್ತರ ನೀಡಲಾಗುವುದು ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
24/02/2022 11:19 am