ಉಡುಪಿ: ಉಡುಪಿಯ ಕಾಪುವಿನಲ್ಲಿ ಮುಸಲ್ಮಾನರಿಗೆ ವ್ಯಾಪಾರ ಬಹಿಷ್ಕಾರ ವಿಚಾರವಾಗಿ ಉಡುಪಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕಾನೂನು ಇದಕ್ಕೆ ಅವಕಾಶ ಕೊಡುವುದಿಲ್ಲ ಎಂದ ಅವರು, ಯಾರದೇ ಜಾತ್ರೆಯಲ್ಲಿ ಯಾರು ಬೇಕಾದರೂ ಭಾಗವಹಿಸಬಹುದು. ಮನೆ, ಖಾಸಗಿ ಕಾರ್ಯಕ್ರಮವಾದರೆ ಅದು ಪರವಾಗಿಲ್ಲ.ಇದು ಕಾನೂನಿಗೆ ವಿರುದ್ಧವಾದ ನಡವಳಿಕೆಯಾಗಿದೆ. ಸರಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕರಾವಳಿ, ಮಲೆನಾಡು, ಬಯಲುಸೀಮೆ ಎಲ್ಲಿಯೇ ಇಂತಹ ಘಟನೆಗಳು ನಡೆದರೆ ಸರಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
Kshetra Samachara
19/03/2022 03:45 pm