ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿಲ್ಲ, ಆದರೆ ಈ ಬಾರಿ ಅವರೇ ಬಂದಿಲ್ಲ… ದೇವಸ್ಥಾನದ ಆಡಳಿತ ಮೊಕ್ತೇಸರ ಸ್ಪಷ್ಟನೆ

ಮಂಗಳೂರು: ಮಂಗಳೂರು ನಗರದ ಹೊರವಲಯ ಬಪ್ಪನಾಡು ಕ್ಷೇತ್ರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಣೆ ಆರೋಪಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ್ ಶೆಟ್ಟಿ ಸ್ಪಷ್ಪನೆ ನೀಡಿದ್ದಾರೆ. ದೇವಸ್ಥಾನದ ವಠಾರದಲ್ಲಿ ಬ್ಯಾನರ್ ಹಾಕೋಕೆ ಅವಕಾಶ ಇಲ್ಲ. ದೇವಸ್ಥಾನದ ಹೊರಭಾಗದಲ್ಲಿ ಯಾರು ಬ್ಯಾನರ್ ಹಾಕಿದ್ದಾರೆ ಗೊತ್ತಿಲ್ಲ. ಪ್ರತಿವರ್ಷ ಇಲ್ಲಿ ಮುಸ್ಲಿಮರು ವ್ಯಾಪಾರ ಮಾಡುತ್ತಿದ್ದಾರೆ. ಆದರೆ ಈ ಬಾರಿ ಮುಸ್ಲಿಮರು ಬಂದಿಲ್ಲ. ಇದಕ್ಕೆ ಕಾರಣ ಏನು ಅಂತಾ ಗೊತ್ತಿಲ್ಲ. ಇದಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಕಾರಣ‌ ಅಲ್ಲ. ದೇವಸ್ಥಾನದ ಆಡಳಿತ ಮಂಡಳಿ ಎಂದೂ ನಿಷೇಧ ಹಾಕಿಲ್ಲ ಅಂತ ತಿಳಿಸಿದ್ದಾರೆ..

ಮುಸ್ಲಿಂ ವ್ಯಾಪಾರಿಗಳು ಬಂದರೂ ಹಿಂದೆ ಕಳುಹಿಸೋದಿಲ್ಲ. ಆದರೆ ಅವರಿಗೆ ತೊಂದರೆ ಆದರೆ ದೇವಸ್ಥಾನ ಜವಾಬ್ದಾರಿ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ದೇವಸ್ಥಾನದ ಆಡಳಿತ ಮಂಡಳಿ ಎಂದೂ ತಾರತಮ್ಯ ಮಾಡೋದಿಲ್ಲ. ಕೆಲವರು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಕೊಡಬಾರದು ಅಂತ ಮನವಿ ಮಾಡಿದ್ರು. ಆದರೆ ಈ ವಿಚಾರದಲ್ಲಿ ನಮ್ಮ‌ ನಿರ್ಧಾರವನ್ನು ಅವರಿಗೆ ಸ್ಪಷ್ಟಪಡಿಸಿದ್ದೇವೆ. ದೇವರ ಪಾವಿತ್ರ್ಯತೆ ಗೆ ಧಕ್ಕೆ ತರುವ ಕೆಲಸವನ್ನು ಯಾರೂ ಮಾಡಬಾರದು‌. ದೇವಸ್ಥಾನದಲ್ಲಿ ಯಾರು ಬೇಕಾದರೂ ವ್ಯಾಪಾರ ಮಾಡಬಹುದು. ಆದರೆ ದೇವಸ್ಥಾನದ ಅನುಮತಿ ಇಲ್ಲದೆ ಯಾರಿಗೂ ಅವಕಾಶ ಇಲ್ಲ ಎಂದು ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ್ ಶೆಟ್ಟಿ ಹೇಳಿದ್ದಾರೆ.

Edited By : Nagesh Gaonkar
PublicNext

PublicNext

23/03/2022 08:16 pm

Cinque Terre

44.31 K

Cinque Terre

16

ಸಂಬಂಧಿತ ಸುದ್ದಿ