ಉಡುಪಿ : ಮುಸಲ್ಮಾನರಿಗೆ ವ್ಯಾಪಾರಕ್ಕೆ ಬಹಿಷ್ಕಾರ ಹಾಕಿರುವುದು ದೇಶದ ಸೌಹಾರ್ದ ಪರಂಪರೆಗೆ ಧಕ್ಕೆ ತರುತ್ತಿದೆ.ಇದು ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಣಾಮ ಬೀರುವ ಮೊದಲು ಸರ್ಕಾರ ಮಧ್ಯ ಪ್ರವೇಶ ಮಾಡಿ ಇದನ್ನು ನಿಲ್ಲಿಸಬೇಕು ಎಂದು ಎಸ್ಡಿಪಿಐ ರಾಜ್ಯಧ್ಯಕ್ಷ ಅಬ್ದುಲ್ ಮಜೀದ್ ಮನವಿ ಮಾಡಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಸ್ಲಿಂ ರಾಷ್ಟ್ರಗಳಲ್ಲಿ ಲಕ್ಷಾಂತರ ಹಿಂದೂಗಳು ಮತ್ತು ಕ್ರೈಸ್ತರು ಉದ್ಯೋಗ ನಡೆಸುತ್ತಿದ್ದಾರೆ. ಉದ್ದಿಮೆಗಳನ್ನು ನಡೆಸುತ್ತಿದ್ದಾರೆ. ಆಸ್ಪತ್ರೆ ,ಯೂನಿವರ್ಸಿಟಿ ಗಳನ್ನು ನಡೆಸುತ್ತಿದ್ದಾರೆ. ಇನ್ನು ನಾವು ಇಂಧನವನ್ನು ಮುಸ್ಲಿಂ ರಾಷ್ಟ್ರಗಳಿಂದ ಆಮದು ಮಾಡುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಮುಸಲ್ಮಾನರಿಗೆ ಬಹಿಷ್ಕಾರ ಹಾಕುವುದು ಸರಿಯಲ್ಲ. ನಾವು ವಾಸ್ತವ ಸಂಗತಿಗಳನ್ನು ಒಪ್ಪಿಕೊಳ್ಳಬೇಕಿದೆ.ಸರಕಾರ ಮಧ್ಯಪ್ರವೇಶ ಮಾಡಿ ವ್ಯಾಪಾರ ಬಹಿಷ್ಕಾರಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
Kshetra Samachara
29/03/2022 01:00 pm