ಬಾರ್ಕೂರು: ತುಳುನಾಡಿನ ಪುರಾತನ ರಾಜಧಾನಿ ,ಐತಿಹಾಸಿಕ ನಗರಿ ಬಾರ್ಕೂರಿನಲ್ಲಿಯೂ ಹಿಂದುಯೇತರ ವ್ಯಾಪಾರಿಗಳಿಗೆ ನಿಷೇಧ ಹೇರಲಾಗಿದೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಲ್ಲಿರುವ ಬಾರ್ಕೂರಿನ ಇತಿಹಾಸ ಪ್ರಸಿದ್ಧ ಪಂಚಲಿಂಗೇಶ್ವರ ಜಾತ್ರೆಯಲ್ಲಿ ಹಿಂದೂಯೇತರರಿಗೆ ಅವಕಾಶ ಇಲ್ಲ.
ಈ ಸಂಬಂಧ ಹಿಂದೂ ಜಾಗರಣ ವೇದಿಕೆ ಈಗಾಗಲೇ ದೇವಸ್ಥಾನಕ್ಕೆ ಮನವಿ ಸಲ್ಲಿಸಿದೆ.ಜೊತೆಗೆ ಹಿಂದುಯೇತರ ವ್ಯಾಪಾರಿಗಳಿಗೆ ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂದು ಬ್ಯಾನರ್ ಮತ್ತು ಫ್ಲೆಕ್ಸ್ ಗಳ ಮೂಲಕ ಮಾಹಿತಿ ನೀಡಲಾಗುತ್ತಿದೆ.ಹಿಂದೂ ಸಂಘಟನೆ ಕಾರ್ಯಕರ್ತರು ಕೇಸರಿ ಧ್ವಜ ಹಿಡಿದು ಬಾರ್ಕೂರಿನಲ್ಲಿ ಮೆರವಣಿಗೆ ನಡೆಸಿದ್ದಾರೆ.
Kshetra Samachara
09/04/2022 12:02 pm