ಕಾಪು: ಬಿಹಾರದಿಂದ ರಾಜ್ಯಸಭೆಗೆ ಚುನಾಯಿತರಾಗಿರುವ ಅನಿಲ್ ಪ್ರಸಾದ್ ಹೆಗ್ಡೆ ಅವರು ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿ, ದೇಗುಲದ ಸಮಗ್ರ ಜೀರ್ಣೋದ್ಧಾರ ಕಾಮಗಾರಿಯನ್ನು ವೀಕ್ಷಿಸಿದರು.
ಈ ಸಂದರ್ಭ ಮಾತನಾಡಿದ ಅವರು, ತಾನು ಶ್ರೀ ಮಾರಿಯಮ್ಮ ದೇವಿಯ ಭಕ್ತನಾಗಿದ್ದು ಚಿಕ್ಕಂದಿನಿಂದಲೂ ಮಾರಿಯಮ್ಮ ದೇವಿಯ ದರ್ಶನಕ್ಕಾಗಿ ಬರುತ್ತಿದ್ದೆವು. ಪ್ರಸ್ತುತ ವಾಸುದೇವ ಶೆಟ್ಟಿ ಅವರ ನೇತೃತ್ವದಲ್ಲಿ ಹೊಸ ಮಾರಿಗುಡಿಯು ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವುದು ಸಂತಸದ ವಿಚಾರವಾಗಿದ್ದು ಇಲ್ಲಿನ ಜೀರ್ಣೋದ್ದಾರ ಕಾರ್ಯಗಳಿಗೆ ತಾವು ಕೂಡಾ ಕೈ ಜೋಡಿಸುವುದಾಗಿ ಭರವಸೆ ನೀಡಿದರು. ಮಾರಿಯಮ್ಮ ದೇವಿಯ ಭಕ್ತರು ಜಗದಗಲಕ್ಕೂ ಹರಡಿದ್ದು ಎಲ್ಲರ ಸಹಕಾರದೊಂದಿಗೆ ಅಮ್ಮನ ದೇಗುಲ ಮಾದರಿಯಾಗಿ ನಿರ್ಮಾಣಗೊಳ್ಳಲಿ ಎಂದು ಹಾರೈಸಿದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅರ್ಚಕ ವೇ| ಮೂ| ಶ್ರೀನಿವಾಸ ತಂತ್ರಿ ಕಲ್ಯ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಕಾಪು, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ ಅವರು ದೇವರ ಪ್ರಸಾದದೊಂದಿಗೆ ಅನಿಲ್ ಪ್ರಸಾದ್ ಹೆಗ್ಡೆ ಅವರನ್ನು ಗೌರವಿಸಿದರು.
ಅಭಿವೃದ್ಧಿ ಸಮಿತಿಯ ಗೌರವ ಸಲಹೆಗಾರ ನಡಿಕೆರೆ ರತ್ನಾಕರ ಹೆಗ್ಡೆ, ಉಪಾಧ್ಯಕ್ಷರಾದ ಮನೋಹರ್ ಎಸ್. ಶೆಟ್ಟಿ, ಮಾಧವ ಆರ್. ಪಾಲನ್, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
PublicNext
21/06/2022 08:16 pm