ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ: ಆಗಸ್ಟ್ 15ರಂದು ಉಡುಪಿ ಜಿಲ್ಲೆಗೆ ರಜತ ಮಹೋತ್ಸವ ಸಂಭ್ರಮ: ವೈವಿಧ್ಯಮಯ ಕಾರ್ಯಕ್ರಮ

ಮಣಿಪಾಲ: ಉಡುಪಿ ಜಿಲ್ಲೆ ರಚನೆಯಾಗಿ ಇದೇ ಆಗಸ್ಟ್ 15ಕ್ಕೆ 25 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಅದರೊಂದಿಗೆ ಅಂದಿನ ಉಡುಪಿ ಇಂದಿನ ಉಡುಪಿಯ ಪುನಾರಾವಲೋಕನ ಹಾಗೂ ಮುಂಬರುವ ದಿನಗಳಲ್ಲಿ ಆಗಬೇಕಿರುವ ಕೆಲಸ ಕಾರ್ಯಗಳ ಕುರಿತ ಸಾಧಕ ಭಾದಕಗಳು, ಜನಸಾಮಾನ್ಯರ ಆಶೋತ್ತರ ಗಳನ್ನು ಕ್ರೂಢೀಕರಿಸುವುದರೊಂದಿಗೆ ಜಿಲ್ಲೆಯ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದರು.

ಈ ಕುರಿತ ಸಭೆಯಲ್ಲಿ ಮಾತನಾಡಿದ ಅವರು ರಾಷ್ಟ್ರಧ್ವಜವನ್ನು 3 ದಿನಗಳ ಅವಧಿಯಲ್ಲಿ ರಾಜ್ಯದಾದ್ಯಂತ ಇರುವ ಕೋಟಿಗೂ ಅಧಿಕ ಮನೆಗಳ ಮೇಲೆ ಹಾರಿಸಿ ದೇಶಪ್ರೇಮ ಮೆರೆಯುವುದರೊಂದಿಗೆ ತ್ರಿವರ್ಣಧ್ವಜ ಹಾರಿಸುವ ಹರ್‌ಘ‌ರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.

ಈ ಬಾರಿಯ ಶ್ರೀಕೃಷ್ಣ ಜನ್ಮಾಷ್ಠಮಿಯ ರಾಜ್ಯಮಟ್ಟದ ಕಾರ್ಯಕ್ರಮವನ್ನು ಉಡುಪಿಯ ರಾಜಾಂಗಣದಲ್ಲಿ ಆಗಸ್ಟ್ 19 ರಂದುಆಯೋಜಿಸಲಾಗುವುದು. ಕಾರ್ಯಕ್ರಮದ ಅಂಗವಾಗಿ ಶ್ರೀಕೃಷ್ಣನ ಕುರಿತು ನೃತ್ಯ ರೂಪಕಗಳು, ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ, ಹುಲಿ ವೇಷದ ಸ್ಪರ್ಧೆ ಆಯೋಜಿಸುವುದರ ಜೊತೆಗೆ ಶ್ರೀಕೃಷ್ಣ ಕುರಿತು ವಿದ್ವಾಂಸರಿಂದ ಉಪನ್ಯಾಸ ಆಯೋಜಿಸಲಾಗುವುದು ಎಂದರು. ಸಭೆಯಲ್ಲಿ ಉಸ್ತುವಾರಿ ಸಚಿವ ಅಂಗಾರ ಮತ್ತಿತರರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

02/08/2022 03:31 pm

Cinque Terre

4.11 K

Cinque Terre

0

ಸಂಬಂಧಿತ ಸುದ್ದಿ