ಕಾರ್ಕಳ : ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ಆಯೋಜಿಸಿರುವ ಸಮಾವೇಶದ ಯಶಸ್ಸಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ನೇತೃತ್ವದಲ್ಲಿ ಭರದ ಸಿದ್ಧತೆ ನಡೆಯುತ್ತಿದ್ದು,1 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ.
ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಯ ಬಳಿಕ ಈ ಸಮಾವೇಶ ನಡೆಯಲಿದೆ. ರಾಜಕೀಯವಾಗಿಯೂ ಇದು ಮಹತ್ವ ಪಡೆದಿರುವುದರಿಂದ ಸಣ್ಣಪುಟ್ಟ ಸಂಗತಿಗಳಿಗೂ ಬಿಜೆಪಿ ವಿಶೇಷ ಲಕ್ಷ್ಯ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಕಾರ್ಯಕ್ರಮದ ಖುದ್ದು ಮೇಲುಸ್ತುವಾರಿ ವಹಿಸಿದ್ದು, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಜತೆಗೆ ಈಗಾಗಲೇ ಸ್ಥಳ ಪರಿಶೀಲನೆ ಹಾಗೂ ಸಭೆ ನಡೆಸಿದ್ದಾರೆ.
ಇನ್ನು ಪ್ರಧಾನಿ ಮೋದಿಯವರಿಗೆ ಈ ಕಾರ್ಯಕ್ರಮದ ಸ್ಮರಣಾರ್ಥವಾಗಿ ತುಳುನಾಡಿನ ದ್ಯೋತಕವಾಗಿ ಪರಶುರಾಮನ ಭವ್ಯ ಪುತ್ಥಳಿಯನ್ನು ಉಡುಗೊರೆ ರೂಪದಲ್ಲಿ ಕೊಡಲು ನಿರ್ಧರಿಸಲಾಗಿದೆ. ಕಾರ್ಯಕ್ರಮದ ಬಳಿಕ ಬಿಜೆಪಿ ಕೋರ್ ಕಮಿಟಿ ಸಭೆಯೂ ಸೇರಿದಂತೆ ಸುಮಾರು ಒಂದು ಗಂಟೆ ಕಾಲ ಪಕ್ಷದ ನಾಯಕರ ಜತೆಗೆ ಪ್ರಧಾನಿ ಮೋದಿ ಚರ್ಚೆ ನಡೆಸಲಿದ್ದು, ಇದಕ್ಕೆ ಬೇಕಾದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.
Kshetra Samachara
31/08/2022 06:09 pm