ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ಭಾ.ಜ.ಪಾ ಟ್ರೋಫಿ-2022, ಚಾಲನೆ ನೀಡಿದ ಉಮಾನಾಥ್ ಕೋಟ್ಯಾನ್

ಮೂಡುಬಿದಿರೆ: ಕ್ರೀಡೆಯಲ್ಲಿ ಯಾವುದೇ ಜಾತಿ, ಧರ್ಮ ಪಕ್ಷವನ್ನು ತೋರುವುದಿಲ್ಲ. ಎಲ್ಲರನ್ನೂ ಒಳಗೊಂಡಂತಹ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು,  ಈ ಆಟದಲ್ಲಿ ಸಂಘಟನಾತ್ಮಾಕವಾದಂತಹ ಶಕ್ತಿಯಿದೆ. ಈ ಕ್ರೀಡೆಯನ್ನು ಯಾವುದೇ ರೀತಿಯಲ್ಲಿ ವೈಯಕ್ತಿಕ ವರ್ಚಸ್ಸಿಗೆ ತೆಗೆದುಕೊಳ್ಳದೇ ಕ್ರೀಡಾ ಸ್ಫೂರ್ತಿಯಿಂದ ಆಟವಾಡಿ ಎಂದು ಮೂಲ್ಕಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಕ್ರೀಡಾಳುಗಳಿಗೆ ಶುಭ ಹಾರೈಸಿದರು.

ಅವರು ಸ್ವರಾಜ ಮೈದಾನದಲ್ಲಿ ಆಯೋಜಿಸಲಾದ ಎರಡು ದಿನಗಳ ಭಾ.ಜ.ಪಾ ಟ್ರೋಫಿ 2022ರ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ, ಸಾಂಕೇತಿಕವಾಗಿ ಬ್ಯಾಟ್ ಬೀಸುವ ಮೂಲಕ ಪಂದ್ಯಾಟಕ್ಕೆ ಚಾಲನೆಯನ್ನು ನೀಡಿದರು.

ಮುಲ್ಕಿ ನಗರ ಪಂ. ಅಧ್ಯಕ್ಷ ಸುಭಾಷ್ ಶೆಟ್ಟಿ, ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

12/03/2022 09:22 pm

Cinque Terre

5.74 K

Cinque Terre

0

ಸಂಬಂಧಿತ ಸುದ್ದಿ