ಕಾಪು: ದೇಶದ 75 ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕಾಪು ಮಂಡಲ ಹಿಂದುಳಿದ ಮೋರ್ಚಾ ವತಿಯಿಂದ "ದೇಶಕ್ಕಾಗಿ ಓಟ" ಕಾರ್ಯಕ್ರಮವನ್ನು ಕಾಪುವಿನಿಂದ ಪಡುಬಿದ್ರೆ ವರೆಗೆ ಹಮ್ಮಿಕೊಂಡಿದ್ದು ಕಾಪು ಶಾಸಕ ಲಾಲಾಜಿ ಮೆಂಡನ್ ಚಾಲನೆ ನೀಡಿ ಶುಭ ಹಾರೈಸಿದರು.
ಸುಮಾರು 200ಕ್ಕೂ ಅಧಿಕ ಸ್ಪರ್ಧಿಗಳು ಓಟದಲ್ಲಿ ಭಾಗವಹಿಸದರು. ಪಡುಬಿದ್ರೆಯಲ್ಲಿ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ನೀಡಿ ಗೌರವಿ ಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಷ್ಟ್ರೀಯ ಹಿಂದುಳಿದ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ನಯನ ಗಣೇಶ್, ಕ ಶ್ರೀಕಾಂತ್ ನಾಯಕ್, ರಾಜ್ಯ ಶಿಲ್ಪಾ ಜಿ ಸುವರ್ಣ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು , ಸುರೇಂದ್ರ ಪಣಿಯೂರು, ಸಂತೋಷ್ ಕುಮಾರ್ ಮೂಡುಬೆಳ್ಳೆ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
14/08/2022 02:45 pm