ಕಾರ್ಕಳ: ಉಡುಪಿ ಜಿಲ್ಲೆಯ ರಜತ ಮಹೋತ್ಸವದ ಅಂಗವಾಗಿ ಅಗ್ನಿಪಥ್ ದೌಡ್ ಎಂಬ ವಿಶೇಷ ಕಾರ್ಯಕ್ರಮಕ್ಕೆ ಸಚಿವ ಸುನಿಲ್ ಕುಮಾರ್ ಇಂದು ಚಾಲನೆ ನೀಡಿದರು. ಸುಮಾರು 75 ಕಿ.ಮೀ. ಮ್ಯಾರಥಾನ್ ಓಟ ಕಾರ್ಕಳ ಭುವನೆಂದ್ರ ಕಾಲೇಜಿನಿಂದ ಆರಂಭಗೊಂಡಿತು.
ಈ ಸಂದರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಕೋಟ್ಯಾನ್, ಕಾರ್ಕಳ ಪುರಸಭಾಧ್ಯಕ್ಷೆ ಸುಮಾ ಕೇಶವ, ಕಾರ್ಕಳ ಬಿಜೆಪಿ ಅಧ್ಯಕ್ಷ ಮಹಾವೀರ್ ಹೆಗ್ಡೆ, ಕಾರ್ಕಳದ ಬಿಜೆಪಿ ಪ್ರಧಾನ ಕಾರ್ಯದರ್ಶಿ ನವೀನ್ ನಾಯಕ್ ಸೇರಿ ಮುಂತಾದವರು ಉಪಸ್ಥಿತರಿದ್ದರು.
Kshetra Samachara
24/08/2022 04:25 pm