ನೀಲಾವರ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಲಯದಿಂದ ಪ್ರಕಟಗೊಂಡ ತೀರ್ಪನ್ನು ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವಾಗತಿಸಿದ್ದಾರೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಶ್ರೀಗಳು, ಕೋರ್ಟ್ ಆದೇಶದಿಂದ ನಮಗೆ ಬಹಳ ಸಂತೋಷವಾಗಿದೆ. ನಮ್ಮ ಧಾರ್ಮಿಕ, ಸಾಮಾಜಿಕ ನಾಯಕರು ಆರೋಪದಿಂದ ಮುಕ್ತರಾಗಿದ್ದಾರೆ. ಈ ತೀರ್ಪಿನಿಂದಾಗಿ ಸತ್ಯಮೇವ ಜಯತೆ ಎಂಬ ಮಾತು ನಿಜವಾಗಿದೆ. ಸತ್ಯಕ್ಕೆ ಯಾವತ್ತೂ ಸಾವಿಲ್ಲ, ಸುಳ್ಳಿಗೆ ಉಳಿಗಾಲವಿಲ್ಲ ಎಂದು ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.
Kshetra Samachara
30/09/2020 04:44 pm