ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮನೆ ಮೇಲಿನ ಸಿಬಿಐ ದಾಳಿ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ ಮತ್ತು ಪ್ರತಿಭಟನಾ ರ್ಯಾಲಿ ನಡೆಯಿತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮನೆ ಮೇಲೆ ದಾಳಿ ನಡೆಸಿರುವುದು ಖಂಡನೀಯ. ಈಗಾಗಲೇ ಉಪಚುನಾವಣೆ ಘೋಷಣೆಯಾಗಿದ್ದು, ಬಿಜೆಪಿಯವರು ಈ ರೀತಿ ಮಾಡಿ ಕಾಂಗ್ರೆಸ್ ನ ಬಾಯಿ ಮುಚ್ಚಿಸುವ ಹುನ್ನಾರ ನಡೆಸಿದ್ದಾರೆ.ಇದನ್ನು ನಾವು ಖಂಡಿಸುತ್ತೇವೆ ಎಂದು ಹೇಳಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಅರ್ಧ ತಾಸಿಗೂ ಹೆಚ್ಚು ಕಾಲ ಅಜ್ಜರಕಾಡು ಮುಖ್ಯರಸ್ತೆಯನ್ನು ಬಂದ್ ಮಾಡಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಳಿಕ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದರು.
ಮುಖಂಡರಾದ ಕಿಶನ್ ಹೆಗ್ಡೆ,ರಮೇಶ್ ಕಾಂಚನ್,ಜ್ಯೋತಿ ಹೆಬ್ಬಾರ್ ,ಇಸ್ಮಾಯಿಲ್ ಅತ್ರಾಡಿ ಸಹಿತ ಅನೇಕರು ಹಾಜರಿದ್ದರು.
Kshetra Samachara
06/10/2020 12:58 pm