ಉಡುಪಿ: ಯಕ್ಷಗಾನ ಮೇಳಗಳು ಕೋವಿಡ್ - 19 ನಿಯಮ ಅಳವಡಿಸಿಕೊಂಡು ನವೆಂಬರ್ ಅಂತ್ಯಕ್ಕೆ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಬೇಕೆಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಅಧಿಕಾರಿಗಳು, ಕಲಾವಿದರು ಹಾಗೂ ಮೇಳಗಳ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.
ಕಟೀಲು, ಬಪ್ಪನಾಡು, ಸಸಿಹಿತ್ಲು ಸೇರಿದಂತೆ 20ಕ್ಕೂ ಹೆಚ್ಚು ವೃತ್ತಿಪರ ತೆಂಕುತಿಟ್ಟಿನ ಯಕ್ಷಗಾನ ಮೇಳಗಳಿದ್ದು, ಸರಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಕಲಾವಿದರು ಮತ್ತು ಪೂರಕ ಕೆಲಸಗಾರರಿದ್ದಾರೆ.
ಕಲಾವಿದರ ಪರವಾಗಿ ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ, ಸರಪಾಡಿ ಅಶೋಕ್ ಶೆಟ್ಟಿ, ಉಜಿರೆ ಅಶೋಕ್ ಭಟ್, ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಾಸ್ಯಕಲಾವಿದ ಸೀತಾರಾಮ್ ಕುಮಾರ್ ಮತ್ತಿತರರು, ವೃತ್ತಿಪರ ಯಕ್ಷಗಾನ ಮೇಳಗಳು ನಿಂತಲ್ಲಿ ಕಲಾವಿದರ ಬದುಕು ದುಸ್ತರವಾಗುವುದು. ಈಗಾಗಲೇ ಕೋವಿಡ್ - 19 ನಿಂದಾಗಿ ನೊಂದ ಕಲಾವಿದರ ಕುಟುಂಬದ ನೆರವಿಗೆ ಸರ್ಕಾರ ಸಹಾಯಹಸ್ತ ಚಾಚಬೇಕು ಎಂದು ಮನವಿ ಮಾಡಿದರು.
ಸರ್ಕಾರದ ಪರವಾಗಿ ಮಾತನಾಡಿದ ಸಚಿವರು, ಇಂತಹ ಪರಿಸ್ಥಿತಿಯಲ್ಲಿ ಯಕ್ಷಗಾನ ಮೇಳಗಳ ಕೊನೆಯ ಕಲಾವಿದನಿಗೂ ತೊಂದರೆ ಆಗದಂತೆ ಸರ್ಕಾರ ಕಲಾವಿದರ ಬೆಂಬಲಕ್ಕೆ ನಿಲ್ಲಲಿದೆ ಎಂದರು.
Kshetra Samachara
06/10/2020 09:14 pm