ಉಡುಪಿ: ದೇಶಾದ್ಯಂತ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ವಿರುದ್ದ ಉಡುಪಿಯಲ್ಲಿ ಸಾಮಾಜಿಕ ಕಾರ್ಯಕರ್ತ ಅನ್ಸಾರ್ ಅಹಮದ್ ನೇತೃತ್ವದಲ್ಲಿ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರು ಮುಖಕ್ಕೆ ಕಪ್ಪು ಬಟ್ಟೆ ಕಟ್ಟಿ ಸರಕಾರದ ವಿರುದ್ಧ, ಅತ್ಯಾಚಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಅನ್ಸಾರ್ ಅಹಮದ್, "ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಅತಿಯಾಗುತ್ತಿವೆ. ದುರಂತ ಎಂದರೆ ಸರಕಾರ ಮತ್ತು ಪಕ್ಷಗಳು ಕೂಡ ಅತ್ಯಾಚಾರಿಗಳ ಪರವಾಗಿ ನಿಂತಿರುವುದು ಆತಂಕಕಾರಿ ಎಂದರು.
ಅಣಕು ಶವದ ಎದುರು ಎರಡು ನಿಮಿಷ ತಮ್ಮ ಮುಖಕ್ಕೆ ಕಪ್ಪು ಬಟ್ಟೆ ಮುಚ್ಚಿ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಯಿತು. ಯುವಶಕ್ತಿ ಕರ್ನಾಟಕ ಕಾರ್ಯಕರ್ತರ ಜೊತೆಗೆ ರಾಜ್ಯಾ ಧ್ಯಕ್ಷ ಪ್ರಮೋದ್ ಉಚ್ಚಿಲ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
07/10/2020 07:53 pm