ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : " ಖಾಸಗಿ ಆಸ್ಪತ್ರೆಗಳು ಜನರ ಜೀವದ ಜೊತೆ ಚೆಲ್ಲಾಟ ಆಡಬಾರದು"

ಉಡುಪಿ: ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸ‌ಂಪೂರ್ಣ ವಿಫಲವಾಗಿದೆ ಎಂದು ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ ಹೇಳಿದ್ದಾರೆ. ಪಕ್ಷ ಕಚೇರಿ ಕುಮಾರಕೃಪಾದಲ್ಲಿ ಯೋಗೀಶ್ ಶೆಟ್ಟಿ, ತಮ್ಮ ಐವತ್ತನೇ ಹುಟ್ಟುಹಬ್ಬ ಆಚರಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಖಾಸಗಿ ಆಸ್ಪತ್ರೆಗಳು ಸರ್ಕಾರದ ನಿಯಂತ್ರಣದಲ್ಲಿ ಇಲ್ಲ ಎಂದು ಆರೋಪಿಸಿದ ಅವರು, ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಭಯದ ವಾತಾವರಣ ನಿರ್ಮಾಣ ಆಗಿದೆ. ಖಾಸಗಿ ಆಸ್ಪತ್ರೆಗಳು ಜನರ ಜೀವದ ಜೊತೆ ಚೆಲ್ಲಾಟ ಆಡಬಾರದು ಎಂದು ಯೋಗೀಶ್ ವಿ. ಶೆಟ್ಟಿ ಎಚ್ಚರಿಕೆ ನೀಡಿದರು. ಕಾರ್ಮಿಕ, ರೈತ ವಿರೋಧಿ ಮಸೂದೆ ವಿರುದ್ಧ ಬೃಹತ್ ಹೋರಾಟ ನಡೆಯುತ್ತಿದೆ. ನಾಳೆ ನಡೆಯಲಿರುವ ಕರ್ನಾಟಕ ಬಂದ್ ಗೆ ಪಕ್ಷ ಬೆಂಬಲ ನೀಡಿದೆ. ಈ ಪ್ರತಿಭಟನೆ, ರ್ಯಾಲಿಗಳಲ್ಲಿ ಜೆಡಿಎಸ್ ಕಾರ್ಯಕರ್ತರು‌ ಮತ್ತು ರೈತರು,ಕೃಷಿಕರು ,ಸಮಾನ ಮನಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ರೈತ ಸಂಘಟನೆಗಳು ನೀಡಿರುವ ಬಂದ್ ಕರೆ ಯಶಸ್ವಿಗೊಳಿಸಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

27/09/2020 06:25 pm

Cinque Terre

31.59 K

Cinque Terre

3

ಸಂಬಂಧಿತ ಸುದ್ದಿ