ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: "ಮೀನು ಕಾರ್ಮಿಕ ರಿಗೆ ಸಾಮಾಜಿಕ ಭದ್ರತೆ ಒದಗಿಸಿ, ಕಲ್ಯಾಣ ಮಂಡಳಿ ರಚಿಸಿ "

ಮಣಿಪಾಲ: ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಮೀನುಗಾರರ ಮತ್ತು ಮೀನು ಕಾರ್ಮಿಕರ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.

ಮುಖ್ಯವಾಗಿ ಮೀನು ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು ಮೀನುಗಾರರ ಕಲ್ಯಾಣ ಮಂಡಳಿ ರಚನೆ ಮಾಡಬೇಕು ಹಾಗೂ ಇನ್ನಿತರ ಹಲವು ಬೇಡಿಕೆಗಳನ್ನು ಮುಂದಿಟ್ಟು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು. ಬಳಿಕ ಅಪರ ಜಿಲ್ಲಾಧಿಕಾರಿ ಮುಖಾಂತರ ರಾಜ್ಯದ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.

ಮೀನುಗಾರರ ಮುಖಂಡರಾದ ಕೆ.ಶಂಕರ್, ಮಹಾಬಲ ವಡೇರಹೋಬಳಿ,ಕವಿರಾಜ್. ಎಸ್.ಕಾಂಚನ್,ಜ್ಯೋತಿ ಮೊಗವೀರ, ಗಣೇಶ ಮೊಗವೀರ, ಉದಯ ಗಾಣಿಗ ಮೊಗೇರ ಹಾಗೂ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಕಾರ್ಯ ದರ್ಶಿ ಸುರೇಶ್ ಕಲ್ಲಾಗರ,ಮುಖಂಡರಾದ ವೆಂಕಟೇಶ್ ಕೋಣಿ,ಗಣೇಶ ತೋಂಡೆಮಕ್ಕಿ,ಉಮೇಶ್, ರಾಮ ಕಾರ್ಕಡ,ನಳಿನಿ, ಸುಂದರಿ,ಜಗನ್ನಾಥ ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

01/10/2020 04:28 pm

Cinque Terre

11.28 K

Cinque Terre

0

ಸಂಬಂಧಿತ ಸುದ್ದಿ