ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ಪ್ರವೀಣ್ ನೆಟ್ಟಾರು ಸುಳ್ಯಕ್ಕೆ ಬಾರದ ಡಿ.ವಿ ಸದಾನಂದ ಗೌಡ-ಪೋಸ್ಟ್ ವೈರಲ್!

ಸುಳ್ಯ: ಸುಳ್ಯದ ಬೆಳ್ಳಾರೆಯಲ್ಲಿ ಹತ್ಯೆಯಾದ ಬಿಜೆಪಿ ಯುವ ಮುಖಂಡನ ಮನೆಗೆ ರಾಜ್ಯದ ಮುಖ್ಯಮಂತ್ರಿ, ಗೃಹ ಸಚಿವರು ಸೇರಿದಂತೆ ಇತರ ಸಚಿವರು, ಶಾಸಕರು, ಸ್ವಾಮೀಜಿಗಳು ಹಾಗೂ ಕೆಲ ಸಂಘಟನೆಯ ಮುಖ್ಯಸ್ಥರು,ಅಧಿಕಾರಿಗಳು, ಕಾರ್ಯಕರ್ತರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಆದರೆ ಸುಳ್ಯದವರೇ ಆದ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡರು ಸುಳ್ಯಕ್ಕೆ ಬಾರದೇ ಇರುವುದು ಇದೀಗ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ.

ಇದೀಗ ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಸಮಾದಾನ ವ್ಯಕ್ತಪಡಿಸಿರುವ ಪೋಸ್ಟ್ ಒಂದು ವೈರಲ್ ಆಗಿದೆ. "ನಮ್ಮೂರಿನಲ್ಲಿ ಡಿ.ವಿ ಸದಾನಂದ ಗೌಡ ಅಂತ ಒಬ್ರು ಇದ್ರು, ಈಗ ಅವರು ಭೂಮಿ ಮೇಲೆ ಇದ್ದಾರಾ ಅಂತ ಯಾರಿಗಾದ್ರು ಗೊತ್ತಾ..? ಯಾಕಂದ್ರೆ ಅವರ ಊರಿನಲ್ಲೇ ಒಂದು ಕೊಲೆಯಾಗಿದೆ. ಅವರಿಗೆ ತಿಳಿಸಬೇಕಿತ್ತು. ಅವರ ಫೋನ್ ನಂಬರ್ ಯಾರಲ್ಲಾದರೂ ಇದ್ರೆ ಕೊಡಿ. ನಾನಾದರು ಫೋನ್ ಮಾಡಿ ಹೇಳ್ತೇನೆ" ಎನ್ನುವ ಬರವಣಿಗೆಯ ಪೋಸ್ಟ್ ಒಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗುತ್ತಿದೆ.

ಡಿ.ವಿ ಸದಾನಂದ ಗೌಡರು ಮೂಲತಃ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡದವರು. ಇದೀಗ ತಮ್ಮ ಸ್ವಕ್ಷೇತ್ರ ಸುಳ್ಯದ ಕಾರ್ಯಕರ್ತ ಮೃತ ಪ್ರವೀಣ್ ನೆಟ್ಟಾರು ಅವರ ಮನೆಗೆ ಬಾರದೇ ಇರುವುದು ಮತ ನೀಡಿ ಗೆಲ್ಲಿಸಿದ ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಿಸಿದೆ.

ಈ ತರಹ ಪೋಸ್ಟ್ ಒಂದು ಹರಿದಾಡುವ ಬೆನ್ನಲ್ಲೇ ಇಂದು ಮಧ್ಯಾಹ್ನ ಡಿ.ವಿ ಸದಾನಂದ ಗೌಡ ಅವರು ಮೃತ ಪ್ರವೀಣ್ ಅವರ ಮನೆಗೆ ಭೇಟಿ ನೀಡುವ ಮಾರ್ಗ ಸೂಚಿ ಬಿಡುಗಡೆ ಮಾಡಲಾಗಿದ್ದು ಡಿ.ವಿ ಅವರು ಇಂದು ಸುಳ್ಯಕ್ಕೆ ಆಗಮಿಸಲಿದ್ದಾರೆ.

Edited By :
PublicNext

PublicNext

30/07/2022 12:01 pm

Cinque Terre

24.31 K

Cinque Terre

7

ಸಂಬಂಧಿತ ಸುದ್ದಿ