ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಇ.ಡಿ. ತನಿಖೆ ಕೈ ಬಿಡಿ; ಸಿಎಫ್ ಐ ನಿಂದ ಸಂಸದ ನಳಿನ್ ಕಚೇರಿಗೆ ಮುತ್ತಿಗೆ ಯತ್ನ

ಮಂಗಳೂರು: ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಕಚೇರಿಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ( ಸಿಎಫ್ಐ) ಸಂಘಟನೆಯ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು.

PFI ಮುಖಂಡರ ಮೇಲೆ ಇ.ಡಿ. ತನಿಖೆ ವಿರೋಧಿಸಿ ಸಿಎಫ್ ಐ ಕಾರ್ಯಕರ್ತರು ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ‌ ನಡೆಸಿದರು.

ಈ ವೇಳೆ ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದು, ಮಾತಿನ ಚಕಮಕಿ ನಡೆಯಿತು.ಪೊಲೀಸರ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿ ಗೇಟ್ ಮುರಿದು, ಒಳಗೆ ನುಗ್ಗಲು ಯತ್ನಿಸಿದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Edited By : Manjunath H D
Kshetra Samachara

Kshetra Samachara

26/12/2020 01:14 pm

Cinque Terre

23.43 K

Cinque Terre

4

ಸಂಬಂಧಿತ ಸುದ್ದಿ