ಉಡುಪಿ: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಪಂಚಾಯತ್ ಚುನಾವಣೆ ನಡೆಯುತ್ತಿದೆ. ಉಡುಪಿ ಜಿಲ್ಲೆಯ ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಬೆಳ್ಳಾಲ ಮೂಡುಮುಂದ ವಾರ್ಡ್ ನಲ್ಲಿ ತಮ್ಮ ಮತ ಚಲಾಯಿಸಿದರು.
ಬೆಳಗ್ಗೆ ಏಳು ಗಂಟೆಗೆ ಸರಿಯಾಗಿ ಬಂದ ಶಾಸಕ ಸುಕುಮಾರ ಶೆಟ್ಟಿ, ಮತಗಟ್ಟೆಯಲ್ಲಿ ಮೊದಲ ಓಟ್ ಮಾಡಿದರು. ಉಳಿದಂತೆ ಗ್ರಾಮೀಣ ಭಾಗಗಳಲ್ಲಿ ಜನರು ಬೆಳಿಗ್ಗೆಯೇ ಉತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
Kshetra Samachara
27/12/2020 08:13 am