ಉಡುಪಿ: ಗ್ರಾಮ ಪಂಚಾಯಿತಿ ಎರಡನೇ ಹಂತದ ಚುನಾವಣೆಗಾಗಿ ಮತದಾರರನ್ನು ಕರೆ ತರುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು
ಗುಂಪುಗಳ ಮಧ್ಯೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಂಪಾರು ಬಳಿ ಗಲಾಟೆ ನಡೆದಿದೆ.ಅಭ್ಯರ್ಥಿಗಳ ಪರ ಬೆಂಬಲಿಗರು ತಮ್ಮ ಖಾಸಗಿ ವಾಹನದಲ್ಲಿ
ಮತದಾರರನ್ನು ಕರೆ ತರುತ್ತಿರುವುದನ್ನು ನೋಡಿದ ಪ್ರತಿಸ್ಪರ್ಧಿ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು,
ಈ ವೇಳೆ ಎರಡು ಗುಂಪುಗಳ ಮಧ್ಯೆ ವಾಗ್ವಾದ ನಡೆಯಿತು. ಬಳಿಕ ಪೊಲೀಸರು ಬಂದು ಘಟನೆ ತಿಳಿಗೊಳಿಸಿದರು.
Kshetra Samachara
27/12/2020 06:34 pm