ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಗ್ರಾಪಂ ಚುನಾವಣೆ; ಮತ ಎಣಿಕೆ ಪೂರ್ವಭಾವಿ ತರಬೇತಿ

ಬಂಟ್ವಾಳ: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಮತ ಎಣಿಕೆಯ ಪೂರ್ವಭಾವಿ ತರಬೇತಿ ಸೋಮವಾರ ಬಂಟ್ವಾಳ ತಾಲೂಕು ಪಂಚಾಯಿತಿ ಸಭಾಂಗಣ ಮತ್ತು ಮೊಡಂಕಾಪು ಇನ್ಫೆಂಟ್ ಜೀಸಸ್ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಏಕಕಾಲದಲ್ಲಿ ನಡೆಯಿತು.

ಈ ಸಂದರ್ಭ ಸಹಾಯಕ ಕಮಿಷನರ್ ಮದನ್ ಮೋಹನ್, ತಹಸೀಲ್ದಾರ್ ಅನಿತಾಲಕ್ಷ್ಮೀ, ಮತ ಎಣಿಕೆಯ ನೋಡಲ್ ಅಧಿಕಾರಿ ಜಿಲ್ಲಾ ತರಬೇತಿ ಸಂಸ್ಥೆ ಪ್ರಿನ್ಸಿಪಾಲ್ ವೆಂಕಟೇಶ್,

ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ಕಂದಾಯ ಇಲಾಖೆ ನಿರೀಕ್ಷಕ ರಾಮ ಕಾಟಿಪಳ್ಳ, ನವೀನ್ ಬೆಂಜನಪದವು, ದಿವಾಕರ ಮುಗುಳ್ಯ ಉಪಸ್ಥಿತರಿದ್ದರು.

ತಾಪಂ ಸಭಾಂಗಣದಲ್ಲಿ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಗಳಿಗೆ ತರಬೇತಿ ನಡೆದರೆ, ಮೊಡಂಕಾಪಿನಲ್ಲಿ ಮತ ಎಣಿಕೆ ಮೇಲ್ವಿಚಾರಕರು, ಎಣಿಕೆ ಸಿಬ್ಬಂದಿಗೆ ತರಬೇತಿ ನಡೆಯಿತು.

ತಾಪಂನಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಉಪನ್ಯಾಸಕ ಮೋಹನ್, ಮೊಡಂಕಾಪಿನಲ್ಲಿ ಸನತ್ ರಾಮ್, ಉದಯಕುಮಾರ್ ತರಬೇತಿ ನೀಡಿದರು.

Edited By : Manjunath H D
Kshetra Samachara

Kshetra Samachara

28/12/2020 02:47 pm

Cinque Terre

17.67 K

Cinque Terre

0

ಸಂಬಂಧಿತ ಸುದ್ದಿ