ಮಂಗಳೂರು: ಗ್ರಾಪಂ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ದ.ಕ.ಜಿಲ್ಲೆಯ 220ರಲ್ಲಿ 145 ಗ್ರಾಪಂಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಪ್ರಾಬಲ್ಯ ಮೆರೆದಿದ್ದಾರೆ.
ಉಳ್ಳಾಲದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚು ಸ್ಥಾನ ಗಳಿಸಿದ್ದರೂ, ಉಳಿದಂತೆ ಜಿಲ್ಲೆಯಲ್ಲಿ ಎಲ್ಲ ಕಡೆಗಳಲ್ಲಿಯೂ ಹಿಂದಿನಂತೆ ಬಿಜೆಪಿ ಬೆಂಬಲಿತರು ಹೆಚ್ಚು ಸ್ಥಾನ ಗಳಿಸಿ, ಗೆಲುವಿನ ನಗೆ ಬೀರಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 44, ಜೆಡಿಎಸ್ 1, ಎಸ್ ಡಿಪಿಐ 2 ಸ್ಥಾನ ಗಳಿಸಿದ್ದಾರೆ.
ಜಿಲ್ಲೆಯಲ್ಲಿ 21 ಗ್ರಾಪಂಗಳು ಅತಂತ್ರವಾಗಿದ್ದು, 6 ಸಮಬಲದಲ್ಲಿವೆ. ಈ 27 ಗ್ರಾಪಂಗಳಲ್ಲಿ 20 ಗ್ರಾಪಂಗಳು ಬಿಜೆಪಿ ತೆಕ್ಕೆಗೆ ಬರುವ ಸಾಧ್ಯತೆ ಇದೆ ಎಂದು ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Kshetra Samachara
31/12/2020 10:18 am