ಮಂಗಳೂರು: ಕೆಪಿಸಿಸಿ ವತಿಯಿಂದ ನಾಲ್ಕು ವಿಭಾಗಗಳಲ್ಲಿ ಸಮ್ಮೇಳನ ಆಯೋಜಿಸಲಾಗಿದೆ.
ಈ ಪೈಕಿ ಪ್ರಥಮ ವಿಭಾಗೀಯ ಸಮ್ಮೇಳನವು ಬಂಟ್ವಾಳದಲ್ಲಿ ನಡೆಯಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಬಂಟ್ವಾಳ ಬಿ.ಸಿ.ರೋಡಿನ ಸಾಗರ್ ಆಡಿಟೋರಿಯಂನಲ್ಲಿ ಜನವರಿ 6ರಂದು ಪ್ರತಿನಿಧಿ ಸಮ್ಮೇಳನ ಆಯೋಜಿಸಲಾಗಿದೆ ಎಂದರು.
ಮೈಸೂರು ವಿಭಾಗಕ್ಕೆ ಒಳಪಡುವ ಮೈಸೂರು, ಚಾಮರಾಜನಗರ, ದ.ಕ., ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳನ್ನು ಸೇರಿಸಿಕೊಂಡು ಪಕ್ಷದ ಪ್ರತಿನಿಧಿ ಸಮ್ಮೇಳನದಲ್ಲಿ ಆಹ್ವಾನಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಪಕ್ಷದ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಎಚ್.ಕೆ. ಪಾಟೀಲ್, ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ನಾಯಕರೊಂದಿಗೆ ಒಟ್ಟು 677 ಮಂದಿ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.
Kshetra Samachara
03/01/2021 03:52 pm