ಮಂಗಳೂರು: ಎಸ್ ಡಿಪಿಐ ದ.ಕ.ಜಿಲ್ಲಾ ಸಮಿತಿ ವತಿಯಿಂದ ಗ್ರಾಪಂ ಚುನಾವಣೆ ವಿಜೇತ ಎಸ್‌ಡಿಪಿಐ ಅಭ್ಯರ್ಥಿಗಳಿಗೆ ಅಭಿನಂದನೆ ಕಾರ್ಯಕ್ರಮ ಪುರಭವನದಲ್ಲಿ ನಡೆಯಿತು.
ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಮೈಸೂರು ದಿಕ್ಸೂಚಿ ಭಾಷಣ ಮಾತನಾಡಿ, ಎಸ್‌ಡಿಪಿಐ ಬೆಂಬಲದಿಂದ ಗೆಲುವು ಸಾಧಿಸಿದ ಜಿಲ್ಲೆಯ ಪ್ರತಿ ಅಭ್ಯರ್ಥಿಯೂ ಜನರ ಬಳಿಗೆ ತೆರಳಿ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕೆ ವಿನಃ ಜನರು ನಿಮ್ಮ ಮನೆ ಬಾಗಿಲಿಗೆ ಬರುವಂತಹ ಸನ್ನಿವೇಶ ಸೃಷ್ಟಿಸಬೇಡಿ. ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಸಿಗುವ ಎಲ್ಲ ಸೌಲಭ್ಯ ಅರ್ಹರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಿ.
ಯಾವುದೇ ಕಾರಣಕ್ಕೂ ಪಕ್ಷದ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆಯಬಾರದು. ಭ್ರಷ್ಟಾಚಾರ ಎಸಗಬಾರದು. ಒಂದು ವೇಳೆ ಅಂತಹ ತಪ್ಪು ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ರಾಷ್ಟ್ರೀಯ ಕಾರ್ಯದರ್ಶಿ ಆಲ್ಫಾನ್ಸೋ ಫ್ರಾಂಕೋ ಮುಖ್ಯ ಅತಿಥಿಯಾಗಿ ಮಾತನಾಡಿ,ಗ್ರಾಪಂ ಚುನಾವಣೆ ವಿಜೇತ ಎಸ್‌ಡಿಪಿಐ ಅಭ್ಯರ್ಥಿಗಳು ಜನರ ನಾಡಿಮಿಡಿತ ಅರಿತು ಜವಾಬ್ದಾರಿ ನಿಭಾಯಿಸಬೇಕು ಎಂದರು.
ದ.ಕ.ಜಿಲ್ಲಾ ಎಸ್ ಡಿಪಿಐ ಅಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, ರಾಜ್ಯ ಸಮಿತಿ ಸದಸ್ಯ ಆನಂದ ಮಿತ್ತಬೈಲ್, ಜಿಲ್ಲಾ ಉಪಾಧ್ಯಕ್ಷ ಇಕ್ಬಾಲ್ ಐಎಂಆರ್, ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್.ಎಚ್.ವಿಮೆನ್ ಇಂಡಿಯಾ ಮೂವ್‌ಮೆಂಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆಯಿಶಾ ಬಜಪೆ, ವಿಮೆನ್ ಇಂಡಿಯಾ ದ.ಕ.ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ, ಎಸ್‌ಡಿಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಜಲೀಲ್ ಕೃಷ್ಣಾಪುರ, ಕಾರ್ಪೊರೇಟರ್ ಮುನೀಬ್ ಬೆಂಗರೆ ಸಹಿತ
ಬಂಟ್ವಾಳ, ಬೆಳ್ತಂಗಡಿ, ಮೂಡಬಿದ್ರೆ ವಲಯದ ಅನೇಕ ಮುಖಂಡರು ಭಾಗವಹಿಸಿದ್ದರು.
Kshetra Samachara
04/01/2021 09:49 pm