ಬಂಟ್ವಾಳ: ಕರಾವಳಿಯಲ್ಲಿ ಈ ಹಿಂದೆ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿತ್ತು, ಇಲ್ಲಿ ಮತ್ತೆ ಪಕ್ಷ ಬಲವರ್ಧನೆ ಮಾಡಬೇಕು, ಅದರ ಜೊತೆಗೆ ಇಡೀ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುವ ಕಾರ್ಯವನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದಲೇ ಆರಂಭಿಸಬೇಕೆನ್ನುವ ತೀರ್ಮಾನದಂತೆ ಮೈಸೂರು ವಿಭಾಗೀಯ ಮಟ್ಟದ ಪ್ರತಿನಿಧಿ ಸಂಕಲ್ಪ ಸಮಾವೇಶವನ್ನು ಬಂಟ್ವಾಳದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹಮದ್ ಹೇಳಿದರು.
ಪಾಣೆಮಂಗಳೂರಿನ ಸಾಗರ್ ಆಡಿಟೋರಿಯಂನಲ್ಲಿ ಜ.೬ರಂದು ನಡೆಯಲಿರುವ ಮೈಸೂರು ವಿಭಾಗೀಯ ಮಟ್ಟದ ಪ್ರತಿನಿಧಿ ಸಂಕಲ್ಪ ಸಮಾವೇಶದ ಪೂರ್ವಭಾವಿ ಸಿದ್ಧತೆಯನ್ನು ವೀಕ್ಷಿಸಲು ಸೋಮವಾರ ಬಂಟ್ವಾಳಕ್ಕೆ ಆಗಮಿಸಿದ್ದ ಅವರು ಬಿ.ಸಿ.ರೋಡಿನಲ್ಲಿರುವ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಸಂದರ್ಭ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು.
Kshetra Samachara
04/01/2021 09:58 pm