ಬಂಟ್ವಾಳ: ಪಾಣೆಮಂಗಳೂರು ಸಾಗರ್ ಆಡಿಟೋರಿಯಂ ಸಭಾಂಗಣದಲ್ಲಿ ಮೈಸೂರು ವಿಭಾಗೀಯ ಮಟ್ಟದ ಕಾಂಗ್ರೆಸ್ 'ಪ್ರತಿನಿಧಿ ಸಂಕಲ್ಪ ಸಮಾವೇಶ' ಇಂದು ನಡೆಯಲಿದೆ.
ಈಗಾಗಲೇ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಮುಖ್ಯವೃತ್ತ ಮತ್ತು ಮೇಲ್ಸೇತುವೆ ಉದ್ದಕ್ಕೂ ಕಾಂಗ್ರೆಸ್ ಬಾವುಟ ರಾರಾಜಿಸುತ್ತಿದೆ.
ಈ ಸಮಾವೇಶದಲ್ಲಿ ಪಕ್ಷದ ಮಹತ್ತರ ಜವಾಬ್ದಾರಿ ಹೊತ್ತ ರಾಜ್ಯದ ವಿವಿಧೆಡೆಯಿಂದ ಒಟ್ಟು 677 ಜನ ಭಾಗವಹಿಸಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ, ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಡಿಸಿಸಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸೇರಿದಂತೆ ಮುಂತಾದವರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ
Kshetra Samachara
06/01/2021 08:42 am