ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಸಿದ್ದರಾಮಯ್ಯ ಹೇಳಿಕೆಯಿಂದ ಪಕ್ಷಕ್ಕೆ ನಷ್ಟವಿಲ್ಲ: ಡಿಕೆಶಿವಕುಮಾರ್

ಬಂಟ್ವಾಳ: ಗೋಮಾಂಸ ಭಕ್ಷಣೆ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಅವರ ವೈಯಕ್ತಿಕ. ಅದು ಪಕ್ಷದ್ದಲ್ಲ. ಅದರಿಂದ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬಂಟ್ವಾಳದಲ್ಲಿ ನಡೆಯುತ್ತಿರುವ ಸಂಕಲ್ಪ ಸಮಾವೇಶಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ಗೋಹತ್ಯೆ ನಿಷೇಧ ಮಸೂದೆಗೆ ಸುಗ್ರೀವಾಜ್ಞೆ ಹಿನ್ನೆಲೆಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಗೋಹತ್ಯೆ ನಿಷೇಧ ಕಾನೂನು ಅಗತ್ಯವಿರಲಿಲ್ಲ, ರಾಜಕಾರಣ ಉದ್ದೇಶದಿಂದ ಇದನ್ನ ಜಾರಿ ಮಾಡಿದ್ದಾರೆ, ಗೋವನ್ನ ಪೂಜಿಸುವ ಪದ್ಧತಿ ಮೊದಲಿನಿಂದಲೂ ಇದೆ ಸಿದ್ದರಾಮಯ್ಯನವರು ಅವರ ಅಭ್ಯಾಸದ ಬಗ್ಗೆಯಷ್ಟೇ ಹೇಳಿದ್ದಾರೆ, ಸಿದ್ದರಾಮಯ್ಯ ಹೇಳಿಕೆಯಿಂದ ಪಕ್ಷಕ್ಕೆ ನಷ್ಟವಿಲ್ಲ. ಕಾರ್ಯಕರ್ತರು ಈ ಬಗ್ಗೆ ಅಭಿಪ್ರಾಯ ತಿಳಿಸಿದ್ರೆ ತಪ್ಪೇನಿದೆ ಎಂದರು.

ಎಲ್ಲಾ ವರ್ಗದ ಮಂದಿಯೂ ಹೈನುಗಾರಿಕೆ ಮಾಡುತ್ತಾರೆ. ಅವರೆಲ್ಲರಿಗೂ ಸರಕಾರ 25 ರಿಂದ 50 ಸಾವಿರ ರೂ. ಪರಿಹಾರ ನೀಡಲಿ. ಆಮೇಲೆ ಅವರ ಮನೆಗೆ ಬೇಕಾದ್ರೂ ಕರೆದೊಯ್ಯಲಿ ಎಂದು ಅವರು ಹೇಳಿದರು

Edited By : Manjunath H D
Kshetra Samachara

Kshetra Samachara

06/01/2021 12:34 pm

Cinque Terre

15.3 K

Cinque Terre

4

ಸಂಬಂಧಿತ ಸುದ್ದಿ