ಮಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಯಾಗಿದ್ದ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ನಾಮಪತ್ರ ವಾಪಸ್ ಪಡೆದಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಮಿಥುನ್ ರೈ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಲಹೆಯಂತೆ ನಾನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿರುವ ನಾಮಪತ್ರವನ್ನು ಹಿಂಪಡೆದಿದ್ದೇನೆ.
ಜನವರಿ 10,12,13 ರಂದು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಸಮಿತಿಗೆ ಚುನಾವಣೆ ನಡೆಯಲಿದ್ದು, ಸ್ಪರ್ಧಾಕಣದಲ್ಲಿರುವ ಅಭ್ಯರ್ಥಿಗಳಿಗೆ ಎಲ್ಲರೂ ಮತ ಚಲಾಯಿಸಿ ಎಂದು ಮಿಥುನ್ ರೈ ಕೋರಿದ್ದಾರೆ.
Kshetra Samachara
10/01/2021 10:11 am