ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: "ಗೋ ಮಾತೆ ಶಾಪದಿಂದಲೇ ಸಿದ್ದರಾಮಯ್ಯ ಸಿಎಂ ಪಟ್ಟ ಕಳಕೊಂಡರು"

ಮಂಗಳೂರು: ಬಂಟ್ವಾಳದ ಬಂಟರ ಭವನದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಜನಸೇವಕ ಸಮಾವೇಶ ಇಂದು ನಡೆಯಿತು.

ರಾಜ್ಯ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ದೀಪ ಬೆಳಗಿಸಿ ಸಮಾವೇಶ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಗೋಮಾತೆಯ ಶಾಪದಿಂದ ಸಿದ್ದರಾಮಯ್ಯ ಮುಖ್ಯಮಂತ್ರಿ ಪದವಿ ಕಳೆದುಕೊಂಡಿದ್ದಾರೆ ಮತ್ತು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದಾರೆ. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದನ್ನು ಖಂಡಿಸುವ ಯೋಗ್ಯತೆ ಇಲ್ಲದ ಸಿದ್ದರಾಮಯ್ಯ, ಗೋಮಾಂಸ ತಿನ್ನುತ್ತೇನೆ ಎಂದು ಹೇಳುತ್ತಾರೆ. ಅವರು ಗೋ ಮಾಂಸ ತಿಂದು ಸಾಯಲಿ ಎಂದರು. ಗೋಮಾತೆಯನ್ನು‌ ನಿಂದಿಸಿದ ಪಕ್ಷಗಳು ನೆಲಕಚ್ಚಿ ಹೋಗಿವೆ. ಪ್ರತಿದಿನ ಸಿದ್ದರಾಮಯ್ಯ ಅವರ ಕನಸಿನಲ್ಲಿ ನಳಿನ್ ಕುಮಾರ್ ಕಟೀಲ್ ಬರುತ್ತಾರೆ. ಆ ಹಂತದಲ್ಲಿ ನಳಿನ್‌ ಕುಮಾರ್ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಹಳ್ಳಿ ಜನ ಕಾಂಗ್ರೆಸ್ ಅನ್ನು ಮಣ್ಣುಮುಕ್ಕಿಸಿದ್ದಾರೆ ಎಂದರು.

ಎರಡು ಪಂಚಾಯಿತಿ ಗೆದ್ದ ಪಕ್ಷದವರು ಪಾಕಿಸ್ತಾನಕ್ಕೆ ಜೈಕಾರ ಹಾಕುವ ದೇಶದ್ರೋಹದ ಕೆಲಸ ಮಾಡುತ್ತಿದ್ದಾರೆ. ಪಾಕಿಸ್ತಾನ‌ ಜಿಂದಾಬಾದ್ ಎಂದು ಕೂಗಿದವರು ಮತ್ತೊಮ್ಮೆ ಆ ಪ್ರಯತ್ನ ಮಾಡಿದರೆ ಅವರ ನಾಲಗೆ ಕಿತ್ತು ಹಾಕಬೇಕಾದೀತು. ಅವರಿಗೆ ಕಾನೂನು ಪಾಲನೆ ಮಾಡುವವರ ಮೂಲಕವೇ ಸೂಕ್ತ ಉತ್ತರ ಕೊಡುವುದಾಗಿ ಹೇಳಿದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಎಂ. ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯರಾದ ಈರಣ್ಣ ಕಡಾಡಿ, ಎಂ.ಎನ್.ರವಿಕುಮಾರ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮಾತನಾಡಿದರು.‌ ಶಾಸಕರಾದ ಸಂಜೀವ ಮಠಂದೂರು, ಎಸ್.ಅಂಗಾರ, ಹರೀಶ್ ಪೂಂಜ, ಡಾ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್, ಪ್ರತಾಪ್ ಸಿಂಹ ನಾಯಕ್, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಹರಿಕೃಷ್ಣ ಬಂಟ್ವಾಳ್ ಮೊದಲಾದವರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

11/01/2021 10:56 pm

Cinque Terre

14.78 K

Cinque Terre

3

ಸಂಬಂಧಿತ ಸುದ್ದಿ