ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸಿದ್ದರಾಮಯ್ಯ, ಕುಮಾರಸ್ವಾಮಿ ಮತ್ತೆ ಅಧಿಕಾರಕ್ಕೆ ಬರುವ ಹಗಲು ಕನಸುಕಾಣುತ್ತಿದ್ದಾರೆ:ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ

ಉಡುಪಿ: ಸಚಿವ ಸಂಪುಟ ವಿಸ್ತರಣೆ ನಂತರ ಭಿನ್ನಮತ ಸ್ಪೋಟವಾಗುತ್ತದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಈಶ್ವರಪ್ಪ, ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಡಿಕೆಶಿ ಕಣ್ಣಿಟ್ಟಿದ್ದಾರೆ.

ಸಿದ್ದರಾಮಯ್ಯ ಮೊದಲು ತಮ್ಮ ಸ್ಥಾನ ಉಳಿಸಿಕೊಳ್ಳಬೇಕು. ಸಿದ್ದರಾಮಯ್ಯನನ್ನು ಕಿತ್ತೆಸೆಯುವುದು ಹೇಗೆ ಅಂತ ಡಿಕೆಶಿ ಪ್ಲಾನ್ ಮಾಡುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ತುಂಬಾ ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಈಶ್ವರಪ್ಪ, ಬಿಜೆಪಿ ನಡೆಸುತ್ತಿರುವ ಅಭಿವೃದ್ಧಿ ಕಾರ್ಯಗಳಿಂದ ಸಿದ್ದು ಕಂಗಾಲಾಗಿದ್ದಾರೆ.

ಸಿದ್ದರಾಮಯ್ಯ ಭಂಡತನದ ಮಾತನಾಡುತ್ತಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ವಿರೋಧ ಪಕ್ಷವೇ ಇಲ್ಲ.

ನಾವು ನಾಲ್ಕು ಜನ ಇದ್ದಾಗ ವಿರೋಧಪಕ್ಷ ಏನು ಅಂತ ತೋರಿಸಿದ್ದೇವೆ. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನೇ ನಿರ್ನಾಮ ಮಾಡಿದರು.

ಸಿದ್ದರಾಮಯ್ಯ ಕುಮಾರಸ್ವಾಮಿ ಮತ್ತೆ ಅಧಿಕಾರಕ್ಕೆ ಬರುವ ಹಗಲು ಕನಸು ಕಾಣುತ್ತಿದ್ದಾರೆ ಎಂದು ಹೇಳಿದರು.

Edited By : Nagesh Gaonkar
Kshetra Samachara

Kshetra Samachara

12/01/2021 12:34 pm

Cinque Terre

12.9 K

Cinque Terre

2

ಸಂಬಂಧಿತ ಸುದ್ದಿ