ಉಡುಪಿ: ಚುನಾವಣೆಯಲ್ಲಿ ಗೆದ್ದವರು ಸಚಿವ ಸ್ಥಾನಕ್ಕೆ ಅಪೇಕ್ಷೆ ಪಡುವುದು ತಪ್ಪಲ್ಲ ಎಂದ ಅವರು,ಅನ್ಯ ಪಕ್ಷಗಳಿಂದ ಬಂದವರಿಗೆ ಸಚಿವ ಸ್ಥಾನದ ಭರವಸೆ ಕೊಟ್ಟಿದ್ದೇವೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮಗಿದೆ. ಶೇ. 50ರಷ್ಟು ಕ್ಯಾಬಿನೆಟ್ ಸ್ಥಾನವನ್ನು ಅನ್ಯ ಪಕ್ಷಗಳಿಂದ ಬಂದವರಿಗೆ ನೀಡಬೇಕಾಗುತ್ತದೆ.
ರಾಜ್ಯ ಸರ್ಕಾರದ ಮೇಲೆ ಒತ್ತಡ ಇದೆ.ಕೇಂದ್ರ ನಾಯಕರು ಮತ್ತು ಮುಖ್ಯಮಂತ್ರಿ ಯಾರು ಸಚಿವರಾಗಬೇಕು ಎಂದು ತೀರ್ಮಾನಿಸುತ್ತಾರೆ.
ನಮ್ಮಲ್ಲಿ ಹೊಸ ಬಿಜೆಪಿ ಹಳೇ ಬಿಜೆಪಿ ಪ್ರಶ್ನೆಯೇ ಬರೋದಿಲ್ಲ. ಪಕ್ಷದ ಒಳಗೆ ಇರುವವರೆಲ್ಲರೂ ಬಿಜೆಪಿಯೇ ಎಂದು ಸಚಿವ ಈಶ್ವರಪ್ಪ ಹೇಳಿದರು.
ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ
ಕೋವಿಡ್ ಲಸಿಕೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ. ಯಾವುದನ್ನು ವಿರೋಧಿಸಬೇಕು ಅನ್ನುವ ಪರಿಜ್ಞಾನ ಇಲ್ಲದ ವಿರೋಧ ಪಕ್ಷ ಕೇಂದ್ರ- ರಾಜ್ಯದಲ್ಲಿದೆ. ಯಾವುದರಲ್ಲಿ ರಾಜಕೀಯ ಮಾಡಬೇಕು ಅನ್ನೋದು ವಿಪಕ್ಷಗಳಿಗೆ ಗೊತ್ತಿಲ್ಲ.
ಪ್ರಧಾನಿ ಮೋದಿ ಪ್ರಪಂಚ ಮೆಚ್ಚುವ ರೀತಿಯಲ್ಲಿ ಕೋವಿಡ್ ನಿಯಂತ್ರಿಸಿದ್ದಾರೆ.ಕರ್ನಾಟಕ ರಾಜ್ಯದಲ್ಲಿ ನಿಯಂತ್ರಣದಲ್ಲೂ ಯಶಸ್ವಿಯಾಗಿದ್ದೇವೆ.
ಲಸಿಕೆ ಹಂಚಿಕೆ ವಿಚಾರದಲ್ಲಿ ಪಕ್ಷ ಜಾತಿ ಯಾವುದನ್ನೂ ನೋಡಲ್ಲ. ಕಾಂಗ್ರೆಸ್ ನವರು ಸಹಕಾರ ಕೊಟ್ರೆ ಸಂತೋಷ.ಸಹಕಾರ ಕೊಟ್ಟಿಲ್ಲ ಅಂದ್ರೆ ನಮ್ಮ ಕೆಲಸವನ್ನು ಮಾಡಿಕೊಂಡು ಹೋಗ್ತೇವೆ ಎಂದು ಹೇಳಿದ್ದಾರೆ.
Kshetra Samachara
12/01/2021 12:50 pm