ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಡಬ: ಸರಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪನೆ; ಶಾಸಕರ ನೇತೃತ್ವದಲ್ಲಿ ಸಭೆ

ಕಡಬ: ಕಡಬದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪನೆಯ ಬಗ್ಗೆ ಸುಳ್ಯ ಶಾಸಕ ಎಸ್.ಅಂಗಾರ ನೇತೃತ್ವದಲ್ಲಿ ಅಧಿಕಾರಿಗಳ, ಜನಪ್ರತಿನಿಧಿಗಳ ಮತ್ತು ಸಾರ್ವಜನಿಕರ ಸಭೆ ಕಡಬ ಜೂನಿಯರ್ ಕಾಲೇಜಿನಲ್ಲಿ ನಡೆಯಿತು.

ಕಾಲೇಜು ಸ್ಥಾಪನೆಯ ಬಗ್ಗೆ ಉನ್ನತ ಶಿಕ್ಷಣ ಸಚಿವರ ಜೊತೆಗೆ ಮಾತನಾಡಿ, ಸರಕಾರದ ಮಟ್ಟದಲ್ಲಿ ಆಗಬೇಕಾದ ಕೆಲಸಗಳ ಮನವರಿಕೆ ಮಾಡಲಾಗುವುದು ಎಂದು ಶಾಸಕರು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಮತ್ತು ಶಾಸಕ ಎಸ್. ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯತೆಯ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಶಾಸಕರು, 'ನಾನು ಪಕ್ಷದ ಸಿದ್ಧಾಂತ ಮತ್ತು ಸಂಘಟನೆಗೆ ಬದ್ಧನಾಗಿರುತ್ತೇನೆ. ಯಾವುದೇ ರೀತಿಯಲ್ಲಿ ಅಧಿಕಾರಕ್ಕಾಗಿ ಲಾಬಿಯನ್ನು ಮಾಡುವ ವ್ಯಕ್ತಿತ್ವ ನನ್ನದಲ್ಲ. ದೇವರ ದಯೆಯಿಂದ ಅಧಿಕಾರ ಸಿಕ್ಕಿದರೆ ನಿಷ್ಠೆಯಿಂದ ಕೆಲಸ ಮಾಡುವ ಬದ್ಧತೆಯು ನನ್ನಲ್ಲಿದೆ' ಎಂದಷ್ಟೇ ಹೇಳಿದರು.

Edited By : Manjunath H D
Kshetra Samachara

Kshetra Samachara

12/01/2021 04:08 pm

Cinque Terre

13.69 K

Cinque Terre

0

ಸಂಬಂಧಿತ ಸುದ್ದಿ