ಉಡುಪಿ: ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಜಿಲ್ಲಾ ಘಟಕ ಜ.17ರಂದು ಸಂಜೆ 4 ಗಂಟೆಗೆ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ "ಜಾನಪದ ವೈಭವ" ಆಯೋಜಿಸಿದೆ.
ಉಡುಪಿಯ ಪ್ರತಿಷ್ಠಿತ ರಂಗಭೂಮಿ ಸಂಸ್ಥೆ, ತಲ್ಲೂರು ಫ್ಯಾಮಿಲಿ ಟ್ರಸ್ಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆ ಸಹಯೋಗದಲ್ಲಿ "ಜಾನಪದ ವೈಭವ" ನಡೆಯಲಿದೆ ಎಂದು ಕಾರ್ಯಕ್ರಮದ ಆಯೋಜಕರು ಹೇಳಿದ್ದಾರೆ.
ಈ ಕುರಿತು ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಆಯೋಜಕರು, ಶಾಸಕ ರಘುಪತಿ ಭಟ್ ಅವರು ಜಾನಪದ ವೈಭವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಟಿ.ತಿಮ್ಮೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಲಾ ಸಂಚಯ ಎಂಬ ಕೃತಿಯನ್ನು ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ನಾಡಿನ ವಿವಿಧ ಜಾನಪದ ಕಲೆಗಳ ಪ್ರದರ್ಶನ ನಡೆಯಲಿದೆ ಎಂದು ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಹೇಳಿದ್ದಾರೆ.
Kshetra Samachara
15/01/2021 02:40 pm