ಬಂಟ್ವಾಳ: ನೂತನವಾಗಿ ಸಚಿವರಾದ ಬಳಿಕ ಮೊದಲ ಬಾರಿ ಬಂಟ್ವಾಳ ತಾಲೂಕಿನ ಕಲ್ಲಡ್ಕಕ್ಕೆ ಭೇಟಿ ನೀಡಿದ ಸಚಿವ ಎಸ್. ಅಂಗಾರ, ಶುಕ್ರವಾರ ಹಿರಿಯ ಆರೆಸ್ಸೆಸ್ ಮುಖಂಡ ಡಾ. ಪ್ರಭಾಕರ ಭಟ್ ಅವರನ್ನು ಭೇಟಿಯಾಗಿ ಅವರ ಕಾಲಿಗೆರಗಿ ಆಶೀರ್ವಾದ ಪಡೆದರು. ಈ ಸಂದರ್ಭ ಸಚಿವರನ್ನು ಸನ್ಮಾನಿಸಲಾಯಿತು. ವಿದ್ಯಾಕೇಂದ್ರದ ಅಧ್ಯಕ್ಷರಾದ ಬಿ. ನಾರಾಯಣ ಸೋಮಯಾಜಿ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು. ಈ ಸಂದರ್ಭಲ್ಲಿ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ರುಕ್ಮಯ ಪೂಜಾರಿ, ವಿದ್ಯಾಕೇಂದ್ರದ ವಿವಿಧ ವಿಭಾಗಗಳ ಮುಖ್ಯಸ್ಥರು, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
Kshetra Samachara
15/01/2021 10:26 pm